ನ್ಯೂಯಾರ್ಕ್ – ಪಾಕಿಸ್ತಾನವು ಯಾವಾಗಲೂ ಭಾರತದ ವಿರುದ್ಧ ವಿಶ್ವಸಂಸ್ಥೆಯ ವೇದಿಕೆಯನ್ನು ಬಳಸಿಕೊಂಡಿದೆ. ಜಮ್ಮು-ಕಾಶ್ಮೀರದ ಸಮಸ್ಯೆಯನ್ನು ಪಾಕಿಸ್ತಾನವು ಹಲವು ಬಾರಿ ಪ್ರಸ್ತಾಪಿಸಿದೆ. ಈಗ ಪುನಃ ಪಾಕಿಸ್ತಾನಕ್ಕೆ ಈ ಅವಕಾಶ ಸಿಗಲಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಪಾಕಿಸ್ತಾನಕ್ಕೆ 2 ವರ್ಷಗಳ ಕಾಲ ಸಿಕ್ಕಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇದು ಪಾಕಿಸ್ತಾನದ ಎಂಟನೇಯ ಅವಧಿಯಾಗಿದೆ. ಜುಲೈ ತಿಂಗಳಲ್ಲಿ ಪಾಕಿಸ್ತಾನವು ವಿಶ್ವಸಂಸ್ಥೆಯ ಭದ್ರತಾ ಪರಿಷತ್ತಿನ ಅಧ್ಯಕ್ಷತೆ ವಹಿಸಲಿದೆ, ಇದರಿಂದ ಭಾರತಕ್ಕೆ ಉದ್ವಿಗ್ನತೆಯ ಅಂಶವಾಗಿದೆ. ಈ ಮೂಲಕ ಭಾರತದ ವಿರುದ್ಧ ಪ್ರಚಾರ ಮಾಡುವುದಕ್ಕಾಗಿ ಪಾಕಿಸ್ತಾನವು ಈ ವೇದಿಕೆಯನ್ನು ಬಳಸಿಕೊಳ್ಳಲಿದೆ. ವಿಶ್ವಸಂಸ್ಥೆಯಲ್ಲಿನ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಕಾಶ್ಮೀರದ ಸಮಸ್ಯೆಯನ್ನು ಪ್ರಪಂಚದ ಮುಂದೆ ತರುವ ಅವರ ಕೆಲಸ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಟ್ಟರವಾದಿ ಇಸ್ಲಾಮಿಕ್ ರಾಷ್ಟ್ರವಾದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಪರಿಷತ್ತಿನಲ್ಲಿ ಪ್ರಾತಿನಿಧ್ಯ ನೀಡುವುದು ಅಂದರೆ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿದಂತೆ, ಎಂದು ಹೇಳಿದರೆ ತಪ್ಪಾಗುವುದಿಲ್ಲ ! |