ಜಗತ್ತಿನ ಆಧುನಿಕರಣದೊಂದಿಗೆ ಸಂಭವಿಸಿದ ದೈಹಿಕ ಸಮಸ್ಯೆಗಳಿಗೆ ‘ವ್ಯಾಯಾಮ’ವು ಒಂದು ಪರಿಣಾಮಕಾರಿ ಉಪಾಯವಾಗಿದೆ. ಇತ್ತೀಚೆಗೆ ಈ ಬಗ್ಗೆ ಬಹಳ ಚರ್ಚೆಯಾಗುತ್ತಿದೆ ಮತ್ತು ಆ ಬಗ್ಗೆ ಜಾಗರೂಕತೆ ನಿರ್ಮಾಣವಾಗಿದ್ದರೂ, ವ್ಯಾಯಾಮ ಮಾಡುವುದು ಮಾತ್ರ ಸ್ವಲ್ಪ ಪ್ರಮಾಣದಲ್ಲಿಯೆ ಕಂಡುಬರುತ್ತದೆ. ಇನ್ನೂ ಅನೇಕರಿಗೆ ಮನಸ್ಸಿನಲ್ಲಿ ವ್ಯಾಯಾಮ ವಿಷಯದ ಬಗ್ಗೆ ಕೆಲವು ಸಂದೇಹಗಳಿರುವುದು ಕಂಡು ಬರುತ್ತದೆ. ಸದ್ಯ ಆಗುತ್ತಿರುವ ಅನೇಕ ದೈಹಿಕ ಸಮಸ್ಯೆಗಳಿಗೆ ಉದಾ. ಬೆನ್ನುಮೂಳೆಯ ಕಾಯಿಲೆ, ಮಧುಮೇಹ, ಸ್ಥೂಲಕಾಯಗಳಿಗೆ ಉಪಾಯವೆಂದು ಔಷಧೋಪಚಾರ, ಪಥ್ಯ, ಉಪವಾಸ, ಹೀಗೆ ಅನೇಕ ಮಾರ್ಗಗಳನ್ನು ಆಯ್ಕೆ ಮಾಡುತ್ತಾರೆ. ಈ ಅಂಕಣದಿಂದ ನಾವು ವ್ಯಾಯಾಮ ಮಾಡುವ ಬಗ್ಗೆ ಜಾಗರೂಕತೆಯನ್ನು ಮೂಡಿಸಲಿದ್ದೇವೆ. ಇದರ ಆವಶ್ಯಕತೆ ಮತ್ತು ಮಹತ್ವವನ್ನು ತಿಳಿದುಕೊಳ್ಳಲಿದ್ದೇವೆ, ಹಾಗೆಯೇ ವ್ಯಾಯಾಮ ವಿಷಯದಲ್ಲಿನ ಸಂದೇಹ ನಿವಾರಣೆ ಮಾಡಲಿದ್ದೇವೆ. (ಭಾಗ ೬)
ನೀವು ತೆಳ್ಳಗಿದ್ದರೂ, ವ್ಯಾಯಾಮದಿಂದ ನಿಮ್ಮ ತೂಕವು ಇನ್ನಷ್ಟು ಕಡಿಮೆಯಾಗುತ್ತದೆ, ಎಂದಿಲ್ಲ. ವಾಸ್ತವದಲ್ಲಿ, ಅಂತಹ ಸ್ಥಿತಿಯಲ್ಲಿ ತೂಕವನ್ನು ಹೆಚ್ಚಿಸಲು ಮತ್ತು ದೇಹದ ಸ್ನಾಯುಗಳನ್ನು ಬಲಪಡಿಸಲು ‘ವ್ಯಾಯಾಮ ಮಾಡುವುದು’ ಉತ್ತಮ ನೈಸರ್ಗಿಕ ಆಯ್ಕೆಯಾಗಿದೆ. ನೀವು ವ್ಯಾಯಾಮ ಮಾಡುವಾಗ, ಸ್ನಾಯುವಿನ ದ್ರವ್ಯರಾಶಿ ಮತ್ತು ಒಟ್ಟಾರೆ ದೇಹದ ಶಕ್ತಿ ಹೆಚ್ಚಾಗುತ್ತದೆ. ಇದರಲ್ಲಿ ದೇಹದಲ್ಲಿನ ಅನಗತ್ಯ ಅಂಶಗಳು ಕಡಿಮೆಯಾಗುತ್ತವೆ ಮತ್ತು ಸ್ನಾಯುಗಳ ಬೆಳವಣಿಗೆಯು ತೂಕ ಹೆಚ್ಚಾಗಲು ಸಹಾಯ ಮಾಡುತ್ತದೆ. ಇದಕ್ಕಾಗಿ, ಪೋಷಕಾಂಶ ಗಳನ್ನು ಒದಗಿಸುವ ಸಮತೋಲಿತ ಆಹಾರದೊಂದಿಗೆ ವ್ಯಾಯಾಮವನ್ನು ಸಂಯೋಜಿಸುವುದು ಆವಶ್ಯಕ. ಕಡಿಮೆ ತೂಕದ ವ್ಯಕ್ತಿಗಳು ವೈದ್ಯರು ಅಥವಾ ಆಹಾರ ತಜ್ಞರ ಸಲಹೆ ಪಡೆದು ವ್ಯಾಯಾಮ ಮಾಡಿದರೆ ಹೆಚ್ಚು ಲಾಭವಾಗುವುದು’ ಎಂದರು.
– ಶ್ರೀ. ನಿಮಿಷ ಮ್ಹಾತ್ರೆ, ಭೌತಿಕೋಪಚಾರ ತಜ್ಞ (ಫಿಸಿಯೋಥೆರಪಿಸ್ಟ್), ಫೋಂಡಾ, ಗೋವಾ. (೧೧.೮.೨೦೨೪)