Mobile Usage Guidelines : ಗುಜರಾತ್ ಸರಕಾರದಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವ ಕುರಿತು ಮಾರ್ಗಸೂಚಿ ಪ್ರಸಾರ ಮಾಡಲಿದೆ

ಕರ್ಣಾವತಿ (ಗುಜರಾತ್) – ಕಳೆದ ಕೆಲವು ವರ್ಷಗಳಿಂದ, ದೇಶಾದ್ಯಂತ ಮಕ್ಕಳಲ್ಲಿ ಮೊಬೈಲ್ ಫೋನ್‌ಗಳ ಜನಪ್ರಿಯತೆ ಹೆಚ್ಚುತ್ತಿದೆ. ಇದು ಮಕ್ಕಳ ಅಧ್ಯಯನ ಸಾಮರ್ಥ್ಯ ಮತ್ತು ಕ್ರೀಡೆಗಳಲ್ಲಿ ಆಸಕ್ತಿಯನ್ನು ಕಡಿಮೆ ಮಾಡುತ್ತಿದೆ. ದೇಶದಲ್ಲಿ ಮೊದಲ ಬಾರಿಗೆ ಗುಜರಾತ್‌ನ ಬಿಜೆಪಿ ಸರಕಾರವು ಶಾಲಾ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಮಾಧ್ಯಮ ಮತ್ತು ಮೊಬೈಲ್ ಫೋನ್‌ಗಳ ಬಳಕೆಯ ನಕರಾತ್ಮಕ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಲಿದೆ.

ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

ಶಿಕ್ಷಣ ಖಾತೆ ರಾಜ್ಯ ಸಚಿವೆ ಪ್ರಫುಲ್ಲ ಪನ್ಸೇರಿಯಾ ಇವರು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಮಕ್ಕಳನ್ನು ಮೊಬೈಲ್ ನಿಂದ ದೂರವಿಟ್ಟು ಆಟದ ಮೈದಾನಕ್ಕೆ ಕರೆತರುವುದು ಅವರ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಿಸುವುದು ಇದರ ಉದ್ದೇಶ ಎಂದು ತಿಳಿಸಿದರು. ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗುವುದು. ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ನಿಷೇಧಿಸುವ ಆದೇಶವನ್ನು ನಾವು ಈ ಹಿಂದೆ ಹೊರಡಿಸಿದ್ದೆವು. ಇಂದಿನಿಂದ, ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಹೇಳಿದರು.

ಸಂಪಾದಕೀಯ ನಿಲುವು

ದೇಶದ ಎಲ್ಲಾ ಶಾಲೆಗಳಿಗೂ ಇಂತಹ ಆದೇಶ ಹೊರಡಿಸಬೇಕು !