ತಿರುಪತಿ (ಆಂಧ್ರಪ್ರದೇಶ) – ಇಲ್ಲಿನ ತಿರುಪತಿ ದೇವಸ್ಥಾನದಲ್ಲಿನ ಲಾಡು ವಿತರಣಾ ಕೇಂದ್ರದ ಬಳಿ ಜನವರಿ 13 ರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಪ್ರಸಾದ ತೆಗೆದುಕೊಳ್ಳಲು ಜನರು ನೆರೆದಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.