
ಪ್ರಯಾಗರಾಜ್, ಜನವರಿ 19 (ಸುದ್ದಿ.) – ಮಹಾಕುಂಭ ಮೇಳದಲ್ಲಿ ಸರಕಾರದ ಆರೋಗ್ಯ ಇಲಾಖೆಯ ವತಿಯಿಂದ ಬೀದಿ ನಾಟಕಗಳ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಜನಸಂದಣಿ ಇರುವ ಸ್ಥಳಗಳಲ್ಲಿ ಈ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಅನೈರ್ಮಲ್ಯದಿಂದ ಆಗುವ ವೈರಾಣುಗಳ ದಾಳಿ ಹಾಗೂ ಅದರಿಂದ ಬರುವ ರೋಗಗಳ ಬಗ್ಗೆ ಹಾಗೂ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದಕ್ಕೆ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.