Bengal Rape Case : ಅಪರಾಧಿ ಸಂಜಯ ರಾಯ್‌ಗೆ ಸಾಯುವವರೆಗೆ ಜೀವಾವಧಿ ಶಿಕ್ಷೆ

  • ಕೋಲಕಾತಾದಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ

  • ಸಂತ್ರಸ್ತೆಯ ಕುಟುಂಬಕ್ಕೆ 17 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶ

ಕೋಲಕಾತಾ (ಬಂಗಾಳ) – ಇಲ್ಲಿನ ರಾಧಾ ಗೋವಿಂದ್ ಕರ್ ಆಸ್ಪತ್ರೆಯಲ್ಲಿ ಮಹಿಳಾ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಸಂಜಯ ರಾಯ್‌ಗೆ ಸೀಯಾಲದಹ ನ್ಯಾಯಾಲಯವು ಸಾಯುವವರೆಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದೆ. “ಈ ಪ್ರಕರಣ ಅಪರೂಪದಲ್ಲಿ ಅಪರೂಪವಲ್ಲ” ಎಂದು ಹೇಳುತ್ತಾ, ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಸಂತ್ರಸ್ತ ಮಹಿಳಾ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ; ಆದರೆ, ಸಂತ್ರಸ್ತೆಯ ಕುಟುಂಬ “ನಾವು ನಮ್ಮ ಮಗಳನ್ನು ಕಳೆದುಕೊಂಡಿದ್ದೇವೆ”, ನಮಗೆ ಪರಿಹಾರ ಬೇಡ” ಎಂದು ಅವರು ಹೇಳಿದರು. ಆಗಸ್ಟ್ 9, 2024 ರಂದು ಅತ್ಯಾಚಾರ ಮತ್ತು ಕೊಲೆ ಘಟನೆ ನಡೆದಿತ್ತು.