ಮಂಗಳೂರು – ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಮೊಹಮ್ಮದ್ ಸಾದಿಕ್ ಎಂಬಾತನನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ದೋಷಿ ಎಂದು ಘೋಷಿಸಿ, 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದೆ.
(ಸಾಮಾನ್ಯವಾಗಿ ಅಲ್ಪಸಂಖ್ಯಾತರೆಂದು ಕರೆಯಲ್ಪಡುವ ಮುಸ್ಲಿಮರು ವಾಸ್ತವವಾಗಿ ಅಪರಾಧದಲ್ಲಿ ಬಹುಸಂಖ್ಯಾತ ಇರುತ್ತಾರೆ ! – ಸಂಪಾದಕರು)
ಸಜಿಪ ಮುನ್ನೂರಿನ ಮುಹಮ್ಮದ್ ಸಾದಿಕ್ (24 ವರ್ಷ) ಮೊಬೈಲ್ ಫೋನ್ ಮೂಲಕ 14 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಆತ್ಮಿಯತೆ ಬೆಳೆಸಿದ್ದ. ನಂತರ ಮೇ 2023 ರಲ್ಲಿ, ಸಾದಿಕ್ ಸಂತ್ರಸ್ತೆಯ ಮನೆಯಲ್ಲಿ ಯಾರೂ ಇಲ್ಲದಿರುವಾಗ ಆಕೆಯ ಮನೆಗೆ ಹೋಗಿ ಅತ್ಯಾಚಾರ ಎಸಗಿದನು. ಸಂತ್ರಸ್ತೆಯು ಭಯದಿಂದ ಮೌನವಾಗಿದ್ದಳು. ಮಗಳ ದೇಹದಲ್ಲಿನ ಬದಲಾವಣೆಯನ್ನು ಗಮನಿಸಿದ ತಾಯಿ, ಆಕೆಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ನಂತರ ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.
ಸಂತ್ರಸ್ತೆಯ ತಾಯಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೊಹಮ್ಮದ್ ಸಾದಿಕ್ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಕೆ.ವಿ. ಅವರು ತನಿಖೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದರು. ಅಷ್ಟೊತ್ತಿಗಾಗಲೇ ಸಂತ್ರಸ್ತೆಯು ಗಂಡು ಮಗುವಿಗೆ ಜನ್ಮ ನೀಡಿದಳು. ಈ ಹಿನ್ನೆಲೆಯಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾಗಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಯಿತು. ದಂಡದ ಹಣವನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.