ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ್ – ಶ್ರೀಮದ್ ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿಯವರು ಹಿಂದೂ ಜನಜಾಗೃತಿ ಸಮಿತಿಯ ಸಮಾಜ, ರಾಷ್ಟ್ರ ಮತ್ತು ಧರ್ಮದ ಬಗ್ಗೆ ಮತ್ತು ಹಿಂದೂ ರಾಷ್ಟ್ರದ ಕಾರ್ಯದ ಬಗ್ಗೆ ತಿಳಿದುಕೊಂಡ ನಂತರ ಪ್ರಭಾವಿತರಾದರು. ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಇತ್ತೀಚೆಗೆ ಶ್ರೀಮದ್ ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿ ಅವರನ್ನು ಭೇಟಿಯಾಗಿ ಸಮಿತಿಯ ಕಾರ್ಯಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು ಹಾಗೆಯೇ ಗೋವಾದಲ್ಲಿ ನಡೆಯಲಿರುವ ಅಖಿಲ ಭಾರತ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.
ಶ್ರೀಮದ್ ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿ ಕೂಡ ಸಮಾವೇಶದಲ್ಲಿ ಭಾಗವಹಿಸುವೆವು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢ ರಾಜ್ಯಗಳ ಸಂಘಟಕ ಶ್ರೀ. ಸುನೀಲ್ ಘನವಟ್ ಉಪಸ್ಥಿತರಿದ್ದರು.