
ನ್ಯೂಯಾರ್ಕ್ (ಅಮೇರಿಕಾ) – ಭಾರತೀಯ ವಾಯುಪಡೆಯ ಅಧಿಕಾರಿ ಶುಭಾಂಶು ಶುಕ್ಲಾ ಇತಿಹಾಸ ನಿರ್ಮಿಸಲಿದ್ದಾರೆ. ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗುತ್ತಿದ್ದಾರೆ. ಶುಭಾಂಶು ಈ ಸಾಧನೆ ಮಾಡಿದ ಮೊದಲ ಭಾರತೀಯರಾಗಲಿದ್ದಾರೆ. ಈ ಬಾಹ್ಯಾಕಾಶ ಯಾನವು ಏಪ್ರಿಲ್ ನಿಂದ ಜೂನ್ 2025 ರವರೆಗೆ 14 ದಿನಗಳವರೆಗೆ ಇರುತ್ತದೆ. ಶುಭಾಂಶು ಅವರನ್ನು ಭಾರತದ ‘ಗಗನಯಾನ್’ ಬಾಹ್ಯಾಕಾಶ ಯಾನಕ್ಕೂ ಆಯ್ಕೆ ಮಾಡಲಾಗಿತ್ತು. ಆದರೆ ಈಗ, ‘ನಾಸಾ’ ಶುಭಾಂಶು ಅವರನ್ನು ಆಕ್ಸಿಯಮ್ ಮಿಷನ್ -4 ಗಾಗಿ ಆಯ್ಕೆ ಮಾಡಿದೆ ಎಂದು ತಿಳಿಸಿದೆ. ಈ ಕಾರ್ಯಾಚರಣೆಗಾಗಿ ನಾಸಾದ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶಕ್ಕೆ ಹೋಗಲಿದೆ. ನಾಸಾ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಯನ್ನು ನೀಡಿದೆ. ಬಾಹ್ಯಾಕಾಶಕ್ಕೆ ಹೋಗುವ ನಾಲ್ವರು ಗಗನಯಾತ್ರಿಗಳು ಈ ಪರಿಷತ್ತಿನಲ್ಲಿ ಉಪಸ್ಥಿತರಿದ್ದರು.

ನಾಲ್ವರು ಸದಸ್ಯರ ತಂಡವನ್ನು ಪೆಗಿ ವಿಟ್ಸನ್ ಮುನ್ನಡೆಸಲಿದ್ದು, ಶುಭಾಂಶು ಜೊತೆಗೆ ಪೋಲೆಂಡ್‌ನ ಸ್ಲಾವೊಜ್ ಉಜ್ನಾನ್ಸ್ಕಿ ಮತ್ತು ಹಂಗೇರಿಯ ಟಿಬೋರ್ ಕಾಪು ಕೂಡ ಸೇರಿದ್ದಾರೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು