Tobacco Fine Increase Bengal : ಬಂಗಾಲದಲ್ಲಿ  ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ 1 ಸಾವಿರ ರೂಪಾಯಿ ದಂಡ ವಿಧಿಸುವ ಕಾನೂನು ಜಾರಿಯಾಗಲಿದೆ

ಕೋಲಕಾತಾ (ಬಂಗಾಲ) – ಬಂಗಾಲದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಅಥವಾ ಪಾನ್ ಮಸಾಲಾ ಸೇವಿಸಿ ಉಗುಳುವವರಿಗೆ ದಂಡ ವಿಧಿಸುವ ಮಸೂದೆಯನ್ನು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷೆಯ ನಿಖರವಾದ ಮೊತ್ತವು ಇನ್ನೂ ನಿರ್ಧರಿಸಲಾಗಿಲ್ಲವಾದರೂ, ಅಂತಹ ಪ್ರತಿಯೊಂದು ಅಪರಾಧಕ್ಕೂ 1 ಸಾವಿರ ರೂಪಾಯಿಗಳ ದಂಡವನ್ನು ವಿಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಂಗಾಲದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸುವ ಕಾನೂನು 2003 ರಿಂದ ಜಾರಿಯಲ್ಲಿದೆ. ಇದರ ಪ್ರಕಾರ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ, 2 ನೂರು ರೂಪಾಯಿ ದಂಡ ವಿಧಿಸಲಾಗುತ್ತಿದೆ.

ಸಂಪಾದಕೀಯ ನಿಲುವು

ಕೇವಲ ಇಂತಹ ಕಾನೂನನ್ನು ಜಾರಿಗೆ ತಂದು ಉಪಯೋಗವಿಲ್ಲ, ಈ ನಿಟ್ಟಿನಲ್ಲಿ ಶಿಕ್ಷಣವನ್ನು ಶಾಲೆಯಿಂದಲೇ ನೀಡಬೇಕು.