ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆ

ನವ ದೆಹಲಿ – ಮಣಿಪುರ ರಾಜ್ಯದ ಭಾಜಪ ಸರಕಾರದ ಮುಖ್ಯಮಂತ್ರಿ ಎನ್. ಬಿರೇನ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ರಾಜಭವನಕ್ಕೆ ಹೋಗಿ ರಾಜ್ಯಪಾಲ ಅಜಯ ಕುಮಾರ ಭಲ್ಲಾ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಸಿಂಗ್ ಇಂದು ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ ಶಾ ಅವರನ್ನು ಭೇಟಿ ಮಾಡಿದ್ದರು. ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಾಗಿ ಅವರು ನಿರಂತರವಾಗಿ ಟೀಕೆಗೆ ಗುರಿಯಾಗಿದ್ದಾರೆ.