
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಮಹಂತ ಸತ್ಯೇಂದ್ರ ದಾಸ್ ಅವರು ಇಲ್ಲಿನ ‘ಸಂಜಯ ಗಾಂಧಿ ಪೋಸ್ಟ ಗ್ರಾಜುಯೇಟ ಇನ್‌ಸ್ಟಿಟ್ಯೂಟ ಆಫ್ ಮೆಡಿಕಲ ಸೈನ್ಸಸ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಪಾರ್ಶ್ವವಾಯುವಿಗೆ ತುತ್ತಾಗಿದ್ದರಿಂದ ಫೆಬ್ರವರಿ 3ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫೆಬ್ರವರಿ 11 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.
ಆಚಾರ್ಯ ಸತ್ಯೇಂದ್ರ ದಾಸ್ ಅವರು ಡಿಸೆಂಬರ್ 6, 1992 ರಂದು ಬಾಬ್ರಿ ಕುಸಿಯುವ ಮೊದಲಿನಿಂದಲೂ ರಾಮ ಮಂದಿರದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಅವರು ನಿರ್ವಾಣಿ ಆಖಾಡದ ಸದಸ್ಯರಾಗಿದ್ದರು.