|
ಮುಂಬಯಿ – ಸಮಯ್ ರೈನಾ ಅವರ ‘ಶೋ ಇಂಡಿಯಾಸ್ ಗಾಟ್ ಲೇಟೆಂಟ್’ ನಲ್ಲಿ ಪೋಷಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಯುಟ್ಯೂಬರ್ ರಣವೀರ್ ಅಲಹಾಬಾದಿಯಾ ಸದ್ಯ ಪರಾರಿಯಾಗಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಮತ್ತು ಮನೆಗೆ ಬೀಗ ಹಾಕಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕ್ಷಮೆಯಾಚಿಸಿದ್ದರು. ಅವರ ವಿರುದ್ಧ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧ ಸಂಸತ್ತಿನಲ್ಲಿಯೂ ಧ್ವನಿ ಎತ್ತಲಾಯಿತು. ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ.
ಖಾರ್ ಪೊಲೀಸ್ ಠಾಣೆಯಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು; ಆದರೆ ಅವರು ಪೊಲೀಸರಿಗೆ ಮನೆಗೆ ಬಂದು ಹೇಳಿಕೆ ಪಡೆಯುವಂತೆ ವಿನಂತಿಸಿದರು; ಆದರೆ ಪೊಲೀಸರು ಅದನ್ನು ತಿರಸ್ಕರಿಸಿದರು.