ದೆಹಲಿಯ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಪ್ರಮಾಣ ವಚನ ಸ್ವೀಕಾರ

ಉಪಮುಖ್ಯಮಂತ್ರಿ ಪ್ರವೇಶ್ ವರ್ಮಾ ಸೇರಿ 6 ಜನರು ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ನವದೆಹಲಿ – ಇಲ್ಲಿನ ರಾಮಲೀಲಾ ಮೈದಾನದಲ್ಲಿ ದೆಹಲಿಯ ಭಾಜಪ ಸರಕಾರದ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಪ್ರವೇಶ್ ವರ್ಮಾ ಮತ್ತು ಇತರ 5 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಆಶಿಷ ಸೂದ್, ಮನಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರರಾಜ ಸಿಂಗ್, ಕಪಿಲ ಮಿಶ್ರಾ ಮತ್ತು ಪಂಕಜ ಕುಮಾರ್ ಸಿಂಗ್ ಸೇರಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಭಾಜಪ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಉಪಸ್ಥಿತರಿದ್ದರು. ಇದರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪಮುಖ್ಯಮಂತ್ರಿ ಅಜಿತ್ ಪವಾರ್, ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಮತ್ತಿತರರು ಇದ್ದರು.

ಮಾರ್ಚ್ 8 ರೊಳಗೆ ಮಹಿಳೆಯರ ಖಾತೆಗೆ ಹಣ ! – ರೇಖಾ ಗುಪ್ತಾ

ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರದ 500 ರೂಪಾಯಿ ನೀಡುವ ವಚನವನ್ನು ತಮ್ಮ ಸರಕಾರ ಈಡೇರಿಸಲಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಭರವಸೆ ನೀಡಿದ್ದಾರೆ. ತಿಂಗಳ ಸಹಾಯದ ಮೊದಲ ಕಂತನ್ನು ಮಾರ್ಚ್ 8 ರೊಳಗೆ ಅರ್ಹ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು, ಎಂದಿದ್ದಾರೆ.