ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದ ವ್ಯಕ್ತಿಯ ಹತ್ಯೆ !

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಇವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದ ವ್ಯಕ್ತಿಯನ್ನು ಚಾಕು ಇರಿದು ಹತ್ಯೆ ಮಾಡಲಾಗಿದೆ. ಕಾಲೇಶ್ವರಂ ಯೋಜನೆಯಡಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಮೃತ 50 ವರ್ಷದ ಎನ್. ರಾಜಲಿಂಗ ಮೂರ್ತಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ರಾಜಕೀಯ ಪಕ್ಷದ ‘ಭಾರತ್ ರಾಷ್ಟ್ರ ಸಮಿತಿ’ ಮುಖ್ಯಸ್ಥ ಚಂದ್ರಶೇಖರ ರಾವ್ ಮತ್ತು ಇತರರ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಫೆಬ್ರವರಿ 19 ರಂದು ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಅಜ್ಷಾತ ವ್ಯಕ್ತಿಗಳು ರಾಜಲಿಂಗ ಮೂರ್ತಿ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದರು, ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೇಳೆ ರಾಜಲಿಂಗ ಮೂರ್ತಿ ಮೋಟಾರ್ ಸೈಕಲ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂಬಂಧ ಪೊಲೀಸರು ಅಪರಾಧವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯ ಮಾರನೆಯ ದಿನವೇ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವುದಿತ್ತು.