ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಕಾಕ್ಸ್ ಬಜಾರ್ ನಗರದಲ್ಲಿ ವಾಯುಪಡೆ ನೆಲೆಯ ಮೇಲೆ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕೆಲವು ದುಷ್ಕರ್ಮಿಗಳು ಖಡ್ಗದಿಂದ ದಾಳಿ ನಡೆಸಿದ್ದಾರೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಎರಡು ಪಕ್ಷಗಳ ನಡುವಿನ ಘರ್ಷಣೆಯಿಂದ ಈ ಘಟನೆ ನಡೆದಿರುವುದು ಬೆಳಕಿಗೆ ಬರುತ್ತಿದೆ. ಸ್ಥಳೀಯ ಉದ್ಯಮಿ ಶಿಹಾಬ್ ಕಬೀರ್ ಗುಂಡಿಗೆ ಬಲಿಯಾಗಿದ್ದಾರೆ. ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ದಾಳಿಕೋರರನ್ನು ಗುರುತಿಸಲು ಮತ್ತು ಅವರ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಬಾಂಗ್ಲಾದೇಶದ ಸೇನೆಯ ಸಾರ್ವಜನಿಕ ಸಂಪರ್ಕ ವಿಭಾಗವಾದ ‘ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್’ ಹೇಳಿರುವ ಪ್ರಕಾರ, ನೆಲೆಯ ಹತ್ತಿರದ ಸಮಿತಿ ಪಾರಾ ಪ್ರದೇಶದಲ್ಲಿ ಕೆಲವು ಗೂಂಡಾಗಳು ದಾಳಿ ನಡೆಸಿದ್ದಾರೆ. ಇದಾದ ಬಳಿಕ ಸೈನ್ಯವು ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದೆ. ಪರಿಸ್ಥಿತಿಯನ್ನು ನಿಭಾಯಿಸಲು ವಾಯುಪಡೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.