ಪೊಲೀಸರಿಂದ ಮಧ್ಯಪ್ರವೇಶಿಸಿ ಕಾರ್ಯಕ್ರಮವನ್ನು ನಿಲ್ಲಿಸಲಾಯಿತು
ಪ್ರಯಾಗರಾಜ್ (ಉತ್ತರ ಪ್ರದೇಶ) – ಇಲ್ಲಿನ ಕುಂಭಮೇಳದ ಕಲಾಗ್ರಾಮದಲ್ಲಿ ರಾತ್ರಿ 12 ಗಂಟೆಯವರೆಗೆ ಹಿಂದಿ ಚಲನಚಿತ್ರಗಳ ಹಾಡುಗಳೊಂದಿಗೆ ಆರ್ಕೆಸ್ಟ್ರಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಇದನ್ನು ಪೊಲೀಸರ ಮಧ್ಯಪ್ರವೇಶದ ನಂತರ ನಿಲ್ಲಿಸಲಾಯಿತು. ಈ ರೀತಿಯ ಕಾರ್ಯಕ್ರಮಕ್ಕೆ ಅಧಿಕೃತ ಅನುಮತಿ ಇರಲಿಲ್ಲ ಎಂದು ಇದರಿಂದ ತಿಳಿದುಬರುತ್ತದೆ. ವಾಸ್ತವವಾಗಿ, ಆಧ್ಯಾತ್ಮಿಕ ಸ್ಥಳದಲ್ಲಿ ಹಿಂದಿ ಚಲನಚಿತ್ರದ ಹಾಡುಗಳನ್ನು ನುಡಿಸಲು ಯಾರು ಅನುಮತಿ ನೀಡಿದರು? ಈ ಸ್ಥಳದಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹೇಗೆ ನಡೆಸಲಾಗುತ್ತದೆ ? ಈ ಸಂದರ್ಭದಲ್ಲಿ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ.
ಸಂಪಾದಕೀಯ ನಿಲುವುಮಹಾಕುಂಭಮೇಳಕ್ಕೆ ಮಸಿ ಬಳಿಯಲು ಇಂತಹ ಕೃತ್ಯ ಎಸಗಲಾಗಿದೆಯೇ ಎಂಬುದನ್ನು ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ! |