ಅಂಬಾಲಾದಲ್ಲಿನ ನ್ಯಾಯಾಲಯದ ಪರಿಸರದಲ್ಲಿ ಗುಂಡಿನ ದಾಳಿ; ಗ್ಯಾಂಗ್ ವಾರ್ ಶಂಕೆ !

ಅಂಬಾಲಾ (ಹರಿಯಾಣ) – ಮಾರ್ಚ್ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನ್ಯಾಯಾಲಯದ ಪರಿಸರದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಘಟನಾಸ್ಥಳದಿಂದ 3 ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಿಂದ ಪ್ರಕರಣವು ಗ್ಯಾಂಗ್ ವಾರ್‌ಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಪೋಲೀಸರು ಘಟನಾ ಸ್ಥಳದ ಸುತ್ತಮುತ್ತ ಅಳವಡಿಸಲಾಗಿರುವ ‘ಸಿಸಿಟಿವಿ’ ಕ್ಯಾಮೆರಾಗಳ ಆಧಾರದ ಮೇಲೆ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಸ್ಥಳೀಯರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನ್ಯಾಯಾಲಯದ ಆವರಣದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಂಪಾದಕೀಯ ನಿಲುವು

ಇದು ಪೊಲೀಸ್ ಮತ್ತು ಆಡಳಿತಕ್ಕೆ ನಾಚಿಕೆಗೇಡು !