
ಮುಂಬಯಿ – 2025 ರ ಜನವರಿಯಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ, ನಕಲಿ ದಾಖಲೆಗಳನ್ನು ಬಳಸಿ ಭಾರತೀಯ ಗುರುತಿನ ಚೀಟಿಗಳನ್ನು ಪಡೆದ ಪ್ರಕರಣದಲ್ಲಿ ಭಯೋತ್ಪಾದನಾ ನಿಗ್ರಹ ದಳ ಮತ್ತು ವಿವಿಧ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಾಜ್ಯದಲ್ಲಿ ಒಟ್ಟು 37 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 2021 ರಿಂದ 2025 ರ ಫೆಬ್ರವರಿ 15 ರವರೆಗೆ ಅಕ್ರಮವಾಗಿ ವಾಸಿಸುತ್ತಿದ್ದ 539 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಮತ್ತು 12 ಜನರನ್ನು ಗಡಿಪಾರು ಮಾಡಲಾಗಿದೆ. ಕಾಲಕಾಲಕ್ಕೆ ಕಾರ್ಯಾಚರಣೆಗಳನ್ನು ನಡೆಸಿ ಅನುಮಾನಾಸ್ಪದ ಬಾಂಗ್ಲಾದೇಶಿ ಪ್ರಜೆಗಳ ಮಾಹಿತಿ ಮತ್ತು ಮನೆಗಳನ್ನು ಬಾಡಿಗೆಗೆ ನೀಡುವಾಗ, ಕಾರ್ಮಿಕರಾಗಿ ನೇಮಕ ಮಾಡುವಾಗ ಬಾಡಿಗೆದಾರರ ಕಾರ್ಮಿಕರ ಮಾಹಿತಿಯನ್ನು ಪೊಲೀಸರಿಗೆ ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ವಿಧಾನ ಪರಿಷತ್ತಿನ ಪ್ರಶ್ನೆಗಳಲ್ಲಿ ಬಾಂಗ್ಲಾದೇಶಿ ಒಳನುಸುಳುವಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.
ಅವರು ಮುಂದೆ ಮಾತನಾಡಿ, ಮುಂಬಯಿ ನಗರ ಮತ್ತು ಉಪನಗರಗಳಲ್ಲಿ 2025 ರ ಜನವರಿ 18 ರಿಂದ 2025 ರ ಫೆಬ್ರವರಿ 28 ರವರೆಗೆ 154 ಪ್ರಕರಣಗಳು ದಾಖಲಾಗಿವೆ ಮತ್ತು ಅದರಲ್ಲಿ 251 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. 17 ಬಾಂಗ್ಲಾದೇಶಿ ಪ್ರಜೆಗಳನ್ನು ಅವರ ಮೂಲ ಊರಾದ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ. ಒಬ್ಬ ಮಹಿಳಾ ಬಾಂಗ್ಲಾದೇಶಿ ಪ್ರಜೆಯನ್ನು ಗಡಿಪಾರು ಮಾಡಲಾಗಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ