ಪೊಲೀಸ್ ಮಹಾನಿರ್ದೇಶಕರ ಮಗಳು ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಮಾಡುವಾಗ ಬಂಧನ!

ದುಬೈನಿಂದ ಹಿಂತಿರುಗಿದ ನಂತರ 14.8 ಕೆಜಿ ಚಿನ್ನದೊಂದಿಗೆ ಹಿಡಿದರು!

ಬೆಂಗಳೂರು – 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ದಕ್ಷಿಣ ಭಾರತದ ಚಲನಚಿತ್ರ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ರನ್ಯಾ ರಾವ್ ಅವರು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಪೊಲೀಸ್ ವಸತಿ ನಿಗಮ) ರಾಮಚಂದ್ರ ರಾವ್ ಅವರ ಪುತ್ರಿ. ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಮಾ.3ರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರನ್ಯಾ ಅವರನ್ನು ಬಂಧಿಸಿದರು.

1. ಮಾರ್ಚ್ 4 ರಂದು ಸಂಜೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ, ಆಕೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.

2. ಕಳೆದ 15 ದಿನಗಳಲ್ಲಿ ರನ್ಯಾ ರಾವ್ ನಾಲ್ಕು ಬಾರಿ ದುಬೈಗೆ ಹೋಗಿರುವುದನ್ನು ನಿರ್ದೇಶನಾಲಯ ಪತ್ತೆಹಚ್ಚಿದ ನಂತರ, ಅಧಿಕಾರಿಗಳು ಅವಳ ಚಲನವಲನಗಳ ಮೇಲೆ ನಿಗಾ ವಹಿಸಲು ಪ್ರಾರಂಭಿಸಿದರು. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ ಕೂಡಲೇ ಆಕೆಯನ್ನು ವಿಮಾನ ನಿಲ್ದಾಣದಿಂದ ವಶಕ್ಕೆ ಪಡೆಯಲಾಯಿತು.