ಸರಕಾರಿ ಕೆಲಸದ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರಾಜ್ಯದ ಕಾಂಗ್ರೆಸ್ ಸರಕಾರದ ನಿರ್ಧಾರ!

ವಿಧಾನಸಭೆಯಲ್ಲಿ ಮಸೂದೆ ಮಂಡಿಸಲಾಗುವುದು

ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿನ ಸರಕಾರಿ ಕೆಲಸಗಳ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ನಿರ್ಣಯ ತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ನೇತೃತ್ವದ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಈ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು. ಪ್ರಸ್ತುತ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.

ಸಂಪಾದಕೀಯ ನಿಲುವು

ಮೋಹನದಾಸ ಗಾಂಧಿ ಇವರ ಕಾಲದಿಂದಲೂ ಯಾವುದೇ ಮಾಧ್ಯಮದಿಂದ ಮುಸಲ್ಮಾನರನ್ನು ಎಷ್ಟು ಸಾಧ್ಯವೋ ಅಷ್ಟು ಓಲೈಕೆ ಮಾಡುವ ಪ್ರಯತ್ನಗಳು ಕಾಂಗ್ರೆಸ್ ನಿಂದ ಪ್ರಾರಂಭವಾಗಿದೆ, ಅದು ಇಂದಿಗೂ ಹಾಗೆಯೇ ನಡೆಯುತ್ತಿದೆ. ಎಲ್ಲಿಯವರೆಗೆ ಭಾರತ ಕಾಂಗ್ರೆಸ್ ಮುಕ್ತವಾಗುವುದಿಲ್ಲವೊ ಅಲ್ಲಿಯವರೆಗೆ ಜಾತ್ಯತೀತ ಸಂವಿಧಾನವಿದ್ದರೂ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವರು!