ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಸಂಸದ ಕಾಲಿಸೆಟ್ಟಿ ಅಪ್ಪಲನಾಯ್ಡು ಅವರ ಘೋಷಣೆ

ವಿಜಯನಗರಂ (ಆಂಧ್ರಪ್ರದೇಶ) – ಇಲ್ಲಿನ ತೆಲುಗು ದೇಶಂ ಪಕ್ಷದ ಸಂಸದ ಕಾಲಿಸೆಟ್ಟಿ ಅಪ್ಪಲನಾಯ್ಡು ಆಂಧ್ರಪ್ರದೇಶದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಯಾವುದೇ ಮಹಿಳೆ ಮೂರನೇ ಮಗುವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದರೆ, ಅವರಿಗೆ ತಮ್ಮ ಸಂಬಳದಿಂದ 50 ಸಾವಿರ ರೂಪಾಯಿ ನೀಡಲಾಗುವುದು, ಮತ್ತು ಗಂಡು ಮಗುವಾದರೆ ಹಸುವನ್ನು ನೀಡಲಾಗುವುದು” ಎಂದು ಘೋಷಿಸಿದರು.
1. ಸಂಸದ ಅಪ್ಪಲನಾಯ್ಡು ತಮ್ಮ ಘೋಷಣೆಯ ಬಗ್ಗೆ ಸ್ಪಷ್ಟನೆ ನೀಡುತ್ತಾ, “ಜನಸಂಖ್ಯೆ ಹೆಚ್ಚಳಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ನಾಯ್ಡು ಅವರು ನೀಡಿರುವ ಕರೆ ಮತ್ತು ಅವರಿಬ್ಬರೂ ಮೂರನೇ ಮಗುವಿಗೆ ಜನ್ಮ ನೀಡುವ ಪ್ರಸ್ತಾಪ ನೀಡಿದ ನಂತರ, ನಾನು ಈ ಘೋಷಣೆ ಮಾಡಿದ್ದೇನೆ. ನಾವು ಮಹಿಳೆಯರಿಗೆ ಹೆಚ್ಚು ಮಕ್ಕಳನ್ನು ಹೆರಲು ಕರೆ ನೀಡುತ್ತಿದ್ದೇವೆ ಮತ್ತು ಮೂರನೇ ಮಗುವಿಗೆ ಜನ್ಮ ನೀಡಿದರೆ ಪ್ರೋತ್ಸಾಹಿಸುತ್ತೇವೆ” ಎಂದು ಹೇಳಿದರು.
2. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾರ್ಯಕ್ರಮವೊಂದರಲ್ಲಿ “ಎಲ್ಲಾ ಮಹಿಳಾ ಉದ್ಯೋಗಿಗಳಿಗೆ, ಅವರ ಮಕ್ಕಳ ಸಂಖ್ಯೆ ಎಷ್ಟೇ ಇದ್ದರೂ, ಹೆರಿಗೆ ರಜೆ ನೀಡಲಾಗುವುದು” ಎಂದು ಘೋಷಿಸಿದ್ದರು. ಇದರ ಮೂಲಕ ಮುಂದಿನ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ ಯುವಕರ ಸಂಖ್ಯೆಯನ್ನು ಹೆಚ್ಚಿಸಲು ಮಹಿಳೆಯರು ಸಾಧ್ಯವಾದಷ್ಟು ಮಕ್ಕಳನ್ನು ಹೆರಬೇಕು ಎಂಬ ಸಂದೇಶವನ್ನು ನೀಡಲಾಗಿದೆ.
ಸಂಪಾದಕೀಯ ನಿಲುವುಈ ಸಹಾಯ ಹಿಂದೂ ಮಹಿಳೆಯರಿಗೆ ನೀಡುತ್ತಾರೆಯೇ ಅಥವಾ ಇತರ ಧರ್ಮದವರಿಗೆ ನೀಡುತ್ತಾರೆಯೇ ಎಂಬುದನ್ನು ಸಂಸದರು ಸ್ಪಷ್ಟಪಡಿಸುವುದು ಅವಶ್ಯಕ; ಏಕೆಂದರೆ ಹೆಚ್ಚು ಮಕ್ಕಳನ್ನು ಯಾರು ಹೆರುತ್ತಾರೆಂದು ಬೇರೆ ಹೇಳಬೇಕಾಗಿಲ್ಲ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”