ಕೋಲಾರ, ಮಾರ್ಚ್ 14 (ವಾರ್ತಾ.) – ರಾಜ್ಯ ಸರಕಾರವು ಸರಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಜಾರಿಗೊಳಿಸಿದ ನಂತರ, ಈಗ ‘ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಎಂಜಿನಿಯರ್ ಸಂಘಟನೆ’ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿರುವ ಮೀಸಲಾತಿಯನ್ನು 10%ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರು ಈ ಬೇಡಿಕೆಗೆ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. (ಇದರಿಂದ ರಾಜ್ಯದ ನೀತಿಯ ನಿರ್ಧಾರಗಳನ್ನು ಸಂಪುಟ ಸಭೆಯಲ್ಲ, ಅಲ್ಪಸಂಖ್ಯಾತ ಸಮುದಾಯದ ಸಚಿವ ಜಮೀರ್ ಅಹಮದ್ ಖಾನ್ ತೆಗೆದುಕೊಳ್ಳುತ್ತಾರೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ! – ಸಂಪಾದಕರು)
ಪ್ರಸ್ತುತ ರಾಜ್ಯ ಸರಕಾರವು ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ 4% ಮೀಸಲಾತಿ ನೀಡುತ್ತಿದೆ. ಇತ್ತೀಚೆಗೆ ಘೋಷಣೆಯಾದ ರಾಜ್ಯ ಬಜೆಟ್‌ನಲ್ಲಿ ಸರಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೇ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಎಂಜಿನಿಯರ್ ಸಂಘಟನೆ ಮೇಲಿನ ಬೇಡಿಕೆ ಮಂಡಿಸಿದೆ.