ಪಾಕಿಸ್ತಾನದ ಕಾಲೇಜುಗಳಲ್ಲಿ ಭಾರತೀಯ ಹಾಡುಗಳಿಗೆ ನೃತ್ಯ ಮಾಡುವುದು ನಿಷೇಧ

ಲಾಹೋರ್ (ಪಾಕಿಸ್ತಾನ) – ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಭಾರತೀಯ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಲಾಗಿದೆ. ಪಂಜಾಬ್ ಉನ್ನತ ಶಿಕ್ಷಣ ಆಯೋಗವು ಸರಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಈ ಆದೇಶವನ್ನು ಜಾರಿಗೊಳಿಸಿದೆ. ಕಾಲೇಜುಗಳಲ್ಲಿನ ಅನೈತಿಕ ಮತ್ತು ಅಶ್ಲೀಲ ಕೃತ್ಯಗಳನ್ನು ತಡೆಯಲು ಈ ಆದೇಶ ಹೊರಡಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.