ಇನ್ನೂ 5 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗುವುದು
ಢಾಕಾ (ಬಾಂಗ್ಲಾದೇಶ) – ಇಲ್ಲಿನ ಪಬನಾ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ಬಿಕರ್ಣ ದಾಸ್ ದಿವ್ಯಾ ಮತ್ತು ಪ್ರಣಯ ಕುಂಡು ಎಂಬ ಇಬ್ಬರು ಹಿಂದೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಇದರ ಜೊತೆಗೆ, ಇತರ 5 ವಿದ್ಯಾರ್ಥಿಗಳನ್ನು ಸಹ ಈ ವಿಷಯದಲ್ಲಿ ಅಮಾನತುಗೊಳಿಸುವಂತೆ ಒತ್ತಾಯಿಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ.
ಫಾರ್ಮಸಿ ವಿಭಾಗದ ವಿದ್ಯುತ ಸರಕಾರ, ಸುವರ್ಣಾ ಸರಕಾರ, ದೀಪು ಬಿಸ್ವಾಸ, ತನಯ ಸರಕಾರ ಮತ್ತು ಅಂಕನ ಘೋಷ್ ಅವರು ವಾಟ್ಸಾಪ್‌ನಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ, ವಿಶ್ವವಿದ್ಯಾನಲಯದ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದರು ಮತ್ತು ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಒತ್ತಾಯಿಸಿದರು.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಇಂತಹ ಸುಳ್ಳು ಆರೋಪಗಳನ್ನು ಹೊರಿಸಿ, ಅವರ ಮೇಲೆ ದಾಳಿ ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅದೇ ಈಗ ವಿದ್ಯಾರ್ಥಿಗಳ ವಿಷಯದಲ್ಲಿಯೂ ನಡೆಯುತ್ತಿದೆ. |