ಅಭ್ಯಂಗಸ್ನಾನ (ಮಂಗಲಸ್ನಾನ)

ಯುಗಾದಿ ಪಾಡ್ಯದಂದು ಮುಂಜಾನೆ ಬೇಗನೇ ಎದ್ದು ಮೊದಲು ಅಭ್ಯಂಗ ಸ್ನಾನವನ್ನು ಮಾಡಬೇಕು.

ಅ. ವ್ಯಾಖ್ಯೆ : ಶರೀರಕ್ಕೆ ಎಣ್ಣೆಯನ್ನು ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ.

ಆ. ಇಡೀ ವರ್ಷದಲ್ಲಿ ಅಭ್ಯಂಗಸ್ನಾನವನ್ನು ಮಾಡುವ ದಿನಗಳು

೧. ಸಂವತ್ಸರಾರಂಭ

೨. ವಸಂತೋತ್ಸವವು ಪ್ರಾರಂಭವಾಗುವ ದಿನ ಅಂದರೆ ಫಾಲ್ಗುಣ ಕೃಷ್ಣ ಪಾಡ್ಯ

೩. ದೀಪಾವಳಿಯ ೩ ದಿನಗಳೆಂದರೆ ಆಶ್ವಯುಜ ಕೃಷ್ಣ ಚತುರ್ದಶಿ, ಆಶ್ವಯುಜ ಅಮಾವಾಸ್ಯೆ ಮತ್ತು ಕಾರ್ತಿಕ ಶುಕ್ಲ ಪಾಡ್ಯ

ಇ. ಲಾಭಗಳು

೧. ಸ್ನಾನದಿಂದ ರಜ-ತಮ ಗುಣಗಳು ಒಂದು ಲಕ್ಷಾಂಶದಷ್ಟು ಕಡಿಮೆಯಾಗಿ ಅಷ್ಟೇ ಪ್ರಮಾಣದಲ್ಲಿ ಸತ್ತ್ವಗುಣವು ಹೆಚ್ಚಾಗುತ್ತದೆ; ಇದರ ಪರಿಣಾಮವು ನಿತ್ಯದ ಸ್ನಾನದಿಂದ ಮೂರು ಗಂಟೆ ಉಳಿದರೆ ಅಭ್ಯಂಗಸ್ನಾನದ ಪ್ರಭಾವವು ೪ ರಿಂದ ೫ ಗಂಟೆ ಉಳಿಯುತ್ತದೆ.

೨. ಚರ್ಮಕ್ಕೆ ಯಾವಾಗಲೂ ಸ್ನಿಗ್ಧತೆ ಇರಬೇಕಾಗುತ್ತದೆ, ಆದುದರಿಂದ ಎಣ್ಣೆಯನ್ನು ಹಚ್ಚುತ್ತಾರೆ.

೩. ಬಿಸಿನೀರು ಮಂಗಲಕರ ಮತ್ತು ಶರೀರಕ್ಕೆ ಸುಖದಾಯಕ ವಾಗಿರುತ್ತದೆ; ಆದುದರಿಂದ ಬಿಸಿನೀರಿನಿಂದ ಸ್ನಾನವನ್ನು ಮಾಡುತ್ತಾರೆ. ಎಣ್ಣೆಯನ್ನು ಹಚ್ಚಿದ ನಂತರ ಸ್ನಾನವನ್ನು ಮಾಡುವುದರಿಂದ ಚರ್ಮ ಮತ್ತು ಕೂದಲಿಗೆ ಬೇಕಾದಷ್ಟೇ ಎಣ್ಣೆಯು ಉಳಿಯುತ್ತದೆ. ಆದುದರಿಂದ ಸ್ನಾನಕ್ಕೆ ಮೊದಲು ಎಣ್ಣೆಯನ್ನು ಹಚ್ಚುವುದು ಆವಶ್ಯಕವಾಗಿದೆ. ಸ್ನಾನದ ನಂತರ ಎಣ್ಣೆಯನ್ನು ಹಚ್ಚುವುದು ಯೋಗ್ಯವಲ್ಲ.

(ಆಧಾರ : ‘ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ’)

ಅಭ್ಯಂಗಸ್ನಾನ (ಮಂಗಲಸ್ನಾನ)

ಯುಗಾದಿ ಪಾಡ್ಯದಂದು ಮುಂಜಾನೆ ಬೇಗನೇ ಎದ್ದು ಮೊದಲು ಅಭ್ಯಂಗ ಸ್ನಾನವನ್ನು ಮಾಡಬೇಕು.

ಅ. ವ್ಯಾಖ್ಯೆ : ಶರೀರಕ್ಕೆ ಎಣ್ಣೆಯನ್ನು ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ

ನಂತರ ಬಿಸಿನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ.

ಆ. ಇಡೀ ವರ್ಷದಲ್ಲಿ ಅಭ್ಯಂಗಸ್ನಾನವನ್ನು ಮಾಡುವ ದಿನಗಳು

೧. ಸಂವತ್ಸರಾರಂಭ

೨. ವಸಂತೋತ್ಸವವು ಪ್ರಾರಂಭವಾಗುವ ದಿನ ಅಂದರೆ ಫಾಲ್ಗುಣ ಕೃಷ್ಣ ಪಾಡ್ಯ

೩. ದೀಪಾವಳಿಯ ೩ ದಿನಗಳೆಂದರೆ ಆಶ್ವಯುಜ ಕೃಷ್ಣ ಚತುರ್ದಶಿ, ಆಶ್ವಯುಜ ಅಮಾವಾಸ್ಯೆ ಮತ್ತು ಕಾರ್ತಿಕ ಶುಕ್ಲ ಪಾಡ್ಯ

ಇ. ಲಾಭಗಳು

೧. ಸ್ನಾನದಿಂದ ರಜ-ತಮ ಗುಣಗಳು ಒಂದು ಲಕ್ಷಾಂಶದಷ್ಟು ಕಡಿಮೆಯಾಗಿ ಅಷ್ಟೇ ಪ್ರಮಾಣದಲ್ಲಿ ಸತ್ತ್ವಗುಣವು ಹೆಚ್ಚಾಗುತ್ತದೆ; ಇದರ ಪರಿಣಾಮವು ನಿತ್ಯದ ಸ್ನಾನದಿಂದ ಮೂರು ಗಂಟೆ ಉಳಿದರೆ ಅಭ್ಯಂಗಸ್ನಾನದ ಪ್ರಭಾವವು ೪ ರಿಂದ ೫ ಗಂಟೆ ಉಳಿಯುತ್ತದೆ.

೨. ಚರ್ಮಕ್ಕೆ ಯಾವಾಗಲೂ ಸ್ನಿಗ್ಧತೆ ಇರಬೇಕಾಗುತ್ತದೆ, ಆದುದರಿಂದ ಎಣ್ಣೆಯನ್ನು ಹಚ್ಚುತ್ತಾರೆ.

೩. ಬಿಸಿನೀರು ಮಂಗಲಕರ ಮತ್ತು ಶರೀರಕ್ಕೆ ಸುಖದಾಯಕವಾಗಿರುತ್ತದೆ; ಆದುದರಿಂದ ಬಿಸಿನೀರಿನಿಂದ ಸ್ನಾನವನ್ನು ಮಾಡುತ್ತಾರೆ. ಎಣ್ಣೆಯನ್ನು ಹಚ್ಚಿದ ನಂತರ ಸ್ನಾನವನ್ನು ಮಾಡುವುದರಿಂದ ಚರ್ಮ ಮತ್ತು ಕೂದಲಿಗೆ ಬೇಕಾದಷ್ಟೇ ಎಣ್ಣೆಯು ಉಳಿಯುತ್ತದೆ. ಆದುದರಿಂದ ಸ್ನಾನಕ್ಕೆ ಮೊದಲು ಎಣ್ಣೆಯನ್ನು ಹಚ್ಚುವುದು ಆವಶ್ಯಕವಾಗಿದೆ. ಸ್ನಾನದ ನಂತರ ಎಣ್ಣೆಯನ್ನು ಹಚ್ಚುವುದು ಯೋಗ್ಯವಲ್ಲ.

(ಆಧಾರ : ‘ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ’)