ಇಸ್ರೇಲ್‌ನ ಹೊಸ ದಾಳಿಯಲ್ಲಿ 400ಕ್ಕೂ ಹೆಚ್ಚು ಮಂದಿ ಸಾವು
ಟೆಲ್ ಅವಿವ್ (ಇಸ್ರೇಲ್) – “ಇಸ್ರೇಲ್ ಹೋರಾಡುತ್ತದೆ ಮತ್ತು ಗೆಲ್ಲುತ್ತದೆ. ಹಮಾಸ್ ಒತ್ತೆಯಾಳಾಗಿ ಇರಿಸಿಕೊಂಡಿರುವ ನಮ್ಮ ಜನರನ್ನು ನಾವು ಮರಳಿ ತರುತ್ತೇವೆ. ಹಮಾಸ್ ನಮ್ಮ ನಗರಗಳ ಮೇಲೆ ದಾಳಿ ಮಾಡಿದೆ, ನಮ್ಮ ಜನರನ್ನು ಕೊಂದಿದೆ, ನಮ್ಮ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದೆ ಮತ್ತು ನಮ್ಮ ಪ್ರೀತಿಪಾತ್ರರನ್ನು ಅಪಹರಿಸಿದೆ. ಹಮಾಸ್ ಅನ್ನು ನಾಶಪಡಿಸುವವರೆಗೂ ನಾವು ಹಿಂದೆ ಸರಿಯುವುದಿಲ್ಲ ಅಥವಾ ಸುಮ್ಮನೆ ಕೂರುವುದಿಲ್ಲ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪುನರುಚ್ಚರಿಸಿದ್ದಾರೆ. ಇಸ್ರೇಲ್ ಜನವರಿ 19 ರಿಂದ ಪ್ರಾರಂಭಿಸಿದ ಹಮಾಸ್ ವಿರುದ್ಧದ ಕದನವನ್ನು ಮುಂದುವರೆಸಿದೆ. ಇಸ್ರೇಲ್ ಮಾರ್ಚ್ 18 ರಿಂದ ಪುನಃ ಪ್ರಾರಂಭಿಸಿದ ದಾಳಿಯಲ್ಲಿ ಗಾಜಾ ಪಟ್ಟಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
40 ಸಾವಿರ ಜನರು ಬೀದಿಗಿಳಿದು ನೆತನ್ಯಾಹು ವಿರುದ್ಧ ಪ್ರತಿಭಟನೆ
ಮಾರ್ಚ್ 18 ರ ರಾತ್ರಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ 40 ಸಾವಿರಕ್ಕೂ ಹೆಚ್ಚು ಜನರು ಬೀದಿಗಿಳಿದರು. ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಶಿನ್ ಬೆಟ್ ರೋನೆನ್ ಬಾರ್ ಅವರನ್ನು ವಜಾಗೊಳಿಸುವ ನಿರ್ಧಾರವನ್ನು ಜನರು ವಿರೋಧಿಸುತ್ತಿದ್ದಾರೆ.
ಗಾಜಾದಲ್ಲಿ ಹಮಾಸ್ ಸರಕಾರದ ಪ್ರಧಾನಿಯನ್ನು ಇಸ್ರೇಲ್ ಹತ್ಯೆ ಮಾಡಿದೆ
ಗಾಜಾ ಪಟ್ಟಿಯಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆ ಹಮಾಸ್ ಸರಕಾರವನ್ನು ನಡೆಸುತ್ತಿತ್ತು. ಈ ಸರಕಾರದಲ್ಲಿ ಪ್ರಧಾನಿಯಾಗಿದ್ದ ಭಯೋತ್ಪಾದಕ ಇಸ್ಸಾಂ ದಿಬ್ ಅಬ್ದುಲ್ಲಾ ಅಲ್-ದಲಿಸ್ ನನ್ನು ಇಸ್ರೇಲ್ ಹತ್ಯೆ ಮಾಡಿದೆ. ಅಬ್ದುಲ್ಲಾ ಹಮಾಸ್ ಸಂಘಟನೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಜವಾಬ್ದಾರಿಯನ್ನು ಹೊಂದಿದ್ದ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ದಾಳಿ ನಡೆಸಿ ಹಮಾಸ್‌ನ 3 ಪ್ರಮುಖ ಭಯೋತ್ಪಾದಕರನ್ನು ಹತ್ಯೆ ಮಾಡಿದೆ.