ಜಗದಲ್‌ಪುರ (ಛತ್ತೀಸ್‌ಗಢ) – ಛತ್ತೀಸ್‌ಗಢದ ದಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ಪೊಲೀಸ್ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದ್ದು, ಇಲ್ಲಿಯವರೆಗೆ 5 ನಕ್ಸಲೀಯರು ಹತರಾಗಿದ್ದಾರೆ. 500 ಕ್ಕೂ ಹೆಚ್ಚು ಸೈನಿಕರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. 4 ದಿನಗಳ ಹಿಂದೆ ದಂತೇವಾಡ ಮತ್ತು ವಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಡೆದ 2 ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 30 ನಕ್ಸಲೀಯರನ್ನು ಕೊಂದಿದ್ದವು.