16 Naxalites Killed : ಸುಕ್ಮಾ (ಛತ್ತೀಸಗಢ) ಇಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರ ಸಾವು


ಸುಕ್ಮಾ (ಛತ್ತೀಸಗಢ) – ಇಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಹತರಾಗಿದ್ದಾರೆ. ಹಾಗೂ 2 ಸೈನಿಕರು ಗಾಯಗೊಂಡಿದ್ದಾರೆ. ಹತರಾದ ನಕ್ಸಲರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ನಕ್ಸಲರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಕಳೆದ ಒಂದು ವರ್ಷದಲ್ಲಿ ಇಲ್ಲಿಯವರೆಗೆ 410 ನಕ್ಸಲರ ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಕೇರಳಪಾಲ ಪೊಲೀಸ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಈ ಗುಂಡಿನ ಚಕಮಕಿ ಸಂಭವಿಸಿದೆ.

ಮಾರ್ಚ್ 31, 2026ರೊಳಗೆ ನಕ್ಸಲರನ್ನು ನಿರ್ಮೂಲನೆ ಮಾಡುತ್ತೇವೆ! – ಅಮಿತ ಶಾಹ

ಈ ಕಾರ್ಯಾಚರಣೆಯ ನಂತರ ಕೇಂದ್ರ ಗೃಹ ಸಚಿವ ಅಮಿತ ಶಾಹ ಅವರು ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ,  ಸರಕಾರವು 2026 ರ ಮಾರ್ಚ್ 31 ರೊಳಗೆ ನಕ್ಸಲರನ್ನು ನಿರ್ಮೂಲನೆ ಮಾಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ. ಶಸ್ತ್ರಾಸ್ತ್ರಗಳನ್ನು ಹೊಂದಿರುವವರಿಗೆ ನನ್ನ ಮನವಿ ಏನೆಂದರೆ, ಶಸ್ತ್ರಾಸ್ತ್ರಗಳು ಮತ್ತು ಹಿಂಸಾಚಾರವು ಬದಲಾವಣೆಯನ್ನು ತರಲು ಸಾಧ್ಯವಿಲ್ಲ, ಆದರೆ ಶಾಂತಿ ಮತ್ತು ಅಭಿವೃದ್ಧಿಯಿಂದ ಮಾತ್ರ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೇಳಿದ್ದಾರೆ.