ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದು ಗೊಳಿಸಿದ ಕರ್ನಾಟಕ ಉಚ್ಚನ್ಯಾಯಾಲಯ !

ಬೆಂಗಳೂರು – ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ದಾಖಲಿಸಲಾಗಿದ್ದ ಬಲಾತ್ಕಾರ ಪ್ರಕರಣವನ್ನು ಕರ್ನಾಟಕ ಉಚ್ಚನ್ಯಾಯಾಲಯ ರದ್ದುಗೊಳಿಸಿದೆ. ಘಟನೆ ದಾಖಲಿಸುವಲ್ಲಿ 9 ವರ್ಷಗಳ ಗಣನೀಯ ವಿಳಂಬವಾಗಿದೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.

1. ಆಗಸ್ಟ್ 29, 2015 ರಂದು ಸಂತ್ರಸ್ತೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮಿ ಅವರು ಬೆಂಗಳೂರಿನ ಗಿರಿನಗರದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆ ದೂರಿನಲ್ಲಿ ಆರೋಪಿಸಲಾಗಿತ್ತು.

2. ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆ ನಡೆಸಿ ಸೆಪ್ಟೆಂಬರ್ 7, 2018 ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

3. ಶ್ರೀ ರಾಘವೇಶ್ವರ ಸ್ವಾಮಿ ಅವರು ಉಚ್ಚನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ನ್ಯಾಯಾಲಯದಲ್ಲಿ ದಾಖಲಿಸಲಾದ ದೋಷಾರೋಪ ಪಟ್ಟಿ ಮತ್ತು ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿದ್ದರು.