BSP Criticizes WAQF Amendment Bill : “ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುವಲ್ಲಿ ಕೇಂದ್ರ ಸರಕಾರದ ಅವಸರ!” – ಮಾಯಾವತಿ

ಮಾಯಾವತಿ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಕೇಂದ್ರ ಸರಕಾರವು ವಕ್ಫ್ ತಿದ್ದುಪಡಿ ಮಸೂದೆಯನ್ನು ಅವಸರದಲ್ಲಿ ತಂದು ಅಂಗೀಕರಿಸಿದೆ. ಈ ಮಸೂದೆಯನ್ನು ಅರ್ಥಮಾಡಿಕೊಳ್ಳಲು ಜನರಿಗೆ ಹೆಚ್ಚಿನ ಸಮಯವನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಇವರು ಸರಕಾರವನ್ನು ಟೀಕಿಸಿದ್ದಾರೆ.

1. ಅವರು ಮಾತು ಮುಂದುವರೆಸಿ, ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ, ಕೇಂದ್ರ ಸರಕಾರವು ಜನರಿಗೆ ಈ ಮಸೂದೆಯನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಹೆಚ್ಚು ಸಮಯವನ್ನು ನೀಡಿದ್ದರೆ ಮತ್ತು ಈ ಮಸೂದೆಯನ್ನು ಮಂಡಿಸುವ ಮೊದಲು ಅವರ ಎಲ್ಲಾ ಅನುಮಾನಗಳನ್ನು ನಿವಾರಿಸಿದ್ದರೆ, ಅದು ಉತ್ತಮವಾಗಿರುತ್ತಿತ್ತು ಎಂದು ಹೇಳಿದರು.

2. ಈ ಮಸೂದೆಗೆ ಬಹುಜನ ಸಮಾಜ ಪಕ್ಷವು ಒಪ್ಪುವುದಿಲ್ಲ. ಸರಕಾರಗಳು ವಕ್ಫ್ ಕಾನೂನಿನ ದುರುಪಯೋಗವನ್ನು ಮಾಡಿದರೆ, ಅವರ ಪಕ್ಷವು ಮುಸ್ಲಿಂ ಸಮುದಾಯಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಅವರು ಹೇಳಿದರು.

3. ವಕ್ಫ್ ತಿದ್ದುಪಡಿ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಶೀಘ್ರದಲ್ಲೇ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುವುದು.

ಸಂಪಾದಕೀಯ ನಿಲುವು

ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆಗಳನ್ನು ಕೇಳಲಾಗಿತ್ತು ಮತ್ತು ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಸಹ ಕಳುಹಿಸಲಾಗಿತ್ತು ಎಂದು ಮಾಯಾವತಿ ಏಕೆ ಹೇಳುತ್ತಿಲ್ಲ ?