Congress MP moves SC Against Waqf Bill : ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ಸುಧಾರಣಾ ವಿಧೇಯಕದ ವಿರುದ್ಧ ಕಾಂಗ್ರೆಸ್ ಸಂಸದರಿಂದ ಅರ್ಜಿ

ನವದೆಹಲಿ – ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ವಕ್ಫ್ ಸುಧಾರಣಾ ವಿಧೇಯಕದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಅರ್ಜಿಯನ್ನು ಸಲ್ಲಿಸಲಾಗಿದೆ. ಕಾಂಗ್ರೆಸ್ ಸಂಸದ ಮಹಮ್ಮದ್ ಜಾವೇದ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ವಿಧೇಯಕವು ಮುಸಲ್ಮಾನರ ಕುರಿತಾಗಿ ತಾರತಮ್ಯವನ್ನು ಉಂಟುಮಾಡುತ್ತದೆ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಜಾವೇದ್ ವಾದಿಸಿದ್ದಾರೆ.

ಡಿಎಂಕೆ ಕೂಡ ವಕ್ಫ್ ಮಸೂದೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ !

ಇದಕ್ಕೂ ಮೊದಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೂಡ ಈ ಮಸೂದೆಯನ್ನು ತಮ್ಮ ದ್ರಾವಿಡ ಮುನ್ನೇತ್ರ ಕಳಗಂ (ದ್ರಾವಿಡ ಪ್ರಗತಿ ಸಂಘ) ಪಕ್ಷವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಹೇಳಿದ್ದಾರೆ. ಮಾರ್ಚ್ ೨೭ ರಂದು ತಮಿಳುನಾಡು ವಿಧಾನಸಭೆಯು ವಕ್ಫ್ ಸುಧಾರಣಾ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು. ಇದು ಧಾರ್ಮಿಕ ಸೌಹಾರ್ದತೆಯನ್ನು ಹಾಳು ಮಾಡುತ್ತದೆ ಮತ್ತು ಅಲ್ಪಸಂಖ್ಯಾತ ಮುಸಲ್ಮಾನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅದರಲ್ಲಿ ಹೇಳಲಾಗಿದೆ.