|
ನವದೆಹಲಿ – ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮೂ ಅವರು ವಕ್ಫ್ ಸುಧಾರಣೆ ಮಸೂದೆಗೆ ಸಮ್ಮತಿ ನೀಡಿದ್ದಾರೆ. ಕೇಂದ್ರ ಸರಕಾರವು ಹೊಸ ಕಾನೂನಿನ ಕುರಿತು ಗೆಜೆಟ್ ಅಧಿಸೂಚನೆಯನ್ನು ಪ್ರಸಾರ ಮಾಡಿದೆ. ಈಗ ಕೇಂದ್ರ ಸರಕಾರವು ಈ ಕಾನೂನಿನ ಅನುಷ್ಠಾನದ ದಿನಾಂಕದ ಕುರಿತು ಪ್ರತ್ಯೇಕ ಅಧಿಸೂಚನೆಯನ್ನು ಪ್ರಸಾರ ಮಾಡಲಿದೆ.
ಮತ್ತೊಂದೆಡೆ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್, ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಸಂಸದ ಅಸಾದುದ್ದೀನ್ ಓವೈಸಿ ಮತ್ತು ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರು ಈ ಕಾನೂನನ್ನು ಪ್ರತ್ಯೇಕ ಅರ್ಜಿಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕ್ಫ್ ಸುಧಾರಣೆ ಕಾನೂನು ಮುಸ್ಲಿಮರ ಬಗ್ಗೆ ತಾರತಮ್ಯ ಮಾಡುತ್ತದೆ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ.