Nisar Ahmed Imprisonment : ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 68 ವರ್ಷದ ನಿಸಾರ ಅಹ್ಮದನಿಗೆ 20 ವರ್ಷಗಳ ಜೈಲು ಶಿಕ್ಷೆ!

ಬೆಳಗಾವಿ – ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಿಸಾರ ಅಹ್ಮದ ಫಕ್ರುಸಾಬ ಚಾಪಗಾವಿ ಎಂಬ 68 ವರ್ಷದ ವೃದ್ಧ ಆರೋಪಿಗೆ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಘಟನೆ ಫೆಬ್ರವರಿ 24, 2024 ರಂದು ನಂದಗಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ನಿಸಾರ ಬಾಲಕಿಗೆ ಚಾಕೊಲೇಟ ಆಮಿಷವೊಡ್ಡಿ ಜನರಿಲ್ಲದ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಗಡ ಪೊಲೀಸ ಠಾಣೆಯಲ್ಲಿ ‘ಪೋಕ್ಸೊ’ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಮಾನಿಸಿ 20 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.