ವಕ್ಫ್ ಸುಧಾರಣಾ ಕಾಯ್ದೆಗೆ ಬೆಂಬಲ ನೀಡಿದ ನಂತರದ ಘಟನೆ

ಇಂಫಾಲ (ಮಣಿಪುರ) – ಮಣಿಪುರದಲ್ಲೂ ವಕ್ಫ್ ಸುಧಾರಣಾ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದ ಥೌಬಲ ಜಿಲ್ಲೆಯ ಲಿಲೋಂಗ್‌ನಲ್ಲಿ ಮುಸ್ಲಿಮರಿಂದ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಿಂದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 102 ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೆಲವು ಕಡೆ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆಗಳು ನಡೆದವು. ಈ ವೇಳೆ ಭಾಜಪ ಅಲ್ಪಸಂಖ್ಯಾತ ಮೋರ್ಚಾದ ಮಣಿಪುರ ಘಟಕದ ಅಧ್ಯಕ್ಷ ಅಸ್ಕರ್ ಅಲಿ ಅವರ ಮನೆಯನ್ನು ಮುಸ್ಲಿಂ ಪ್ರತಿಭಟನಾಕಾರರು ಧ್ವಂಸಗೊಳಿಸಿ ಬೆಂಕಿ ಹಚ್ಚಿದರು. ಅಸ್ಕರ್ ಅಲಿ ಅವರು ವಕ್ಫ್ ಸುಧಾರಣಾ ಕಾಯ್ದೆಗೆ ಬೆಂಬಲ ನೀಡಿದ್ದರು. ಈ ಘಟನೆಯ ನಂತರ ಅಲಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವನ್ನು ಪ್ರಸಾರ ಮಾಡಿ ಕಾನೂನನ್ನು ಬೆಂಬಲಿಸಿದ್ದಕ್ಕಾಗಿ ಕ್ಷಮೆಯಾಚಿಸಿದರು. ಇಂಫಾಲ ಪೂರ್ವದ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲೂ ಪ್ರತಿಭಟನೆಗಳು ನಡೆದವು.
ಸಂಪಾದಕೀಯ ನಿಲುವು
|
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!