6 ಆರೋಪಿಗಳ ಬಂಧನ
ವಾರಣಾಸಿ (ಉತ್ತರ ಪ್ರದೇಶ) – ಇಲ್ಲಿ ಹೋಳಿ ಹಬ್ಬದ ಸಮಯದಲ್ಲಿ ಓರ್ವ ವಿದ್ಯಾರ್ಥಿನಿಯ ಅಪಹರಣ ಮಾಡಿ 23 ಯುವಕರು 7 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಯುವಕರು ಅತ್ಯಾಚಾರದ ವಿಡಿಯೋಗಳನ್ನು ಮಾಡಿದ್ದಾರೆ. ಈ ಘಟನೆ ಮಾರ್ಚ್ 29 ರಿಂದ ಏಪ್ರಿಲ್ 4 ರ ನಡುವೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 12 ಜನರ ಹೆಸರುಗಳು ತಿಳಿದಿದ್ದು, 11 ಜನರು ಅಪರಿಚಿತರಾಗಿದ್ದಾರೆ. ವಿದ್ಯಾರ್ಥಿನಿ ಹೋಟೆಲ್‌ಗೆ ಸೇರಿದ ಸ್ಪಾ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ಪ್ರಕರಣದಲ್ಲಿ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಸಾಜಿದ್, ಆಯುಷ್ ಸಿಂಗ್, ದಾನಿಶ್ ಖಾನ್, ಅನ್ಮೋಲ್, ಇಮ್ರಾನ್ ಮತ್ತು ಮತ್ತೊಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ಅವರನ್ನು ವಿಚಾರಣೆ ನಡೆಸಲಾಗುತ್ತಿದೆ.
ಸಂಪಾದಕೀಯ ನಿಲುವುಇಂತಹ ಘಟನೆಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸಬೇಕು! |