Mamata Denies Waqf Amendment Implementation : ‘ಬಂಗಾಳದಲ್ಲಿ ವಕ್ಫ್ ಸುಧಾರಣಾ ಕಾಯ್ದೆ ಜಾರಿಗೊಳಿಸುವುದಿಲ್ಲ!’ – ಮಮತಾ ಬ್ಯಾನರ್ಜಿ ಘೋಷಣೆ

ಕೋಲಕಾತಾ (ಬಂಗಾಳ) – ಬಂಗಾಳದಲ್ಲಿ ವಕ್ಫ್ ಸುಧಾರಣಾ ಕಾಯ್ದೆಯನ್ನು ಜಾರಿಗೊಳಿಸಲಾಗುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿ ಜೈನ ಧರ್ಮೀಯರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಘೋಷಿಸಿದರು.

‘ರಾಜಕೀಯ ದೃಷ್ಟಿಯಿಂದ ಒಗ್ಗೂಡಲು ಪ್ರಚೋದಿಸುವವರಿಂದ ಜಾಗರೂಕರಾಗಿರಬೇಕಂತೆ!’

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡಿ, ಅಲ್ಪಸಂಖ್ಯಾತರ ಮತ್ತು ಅವರ ಆಸ್ತಿಯನ್ನು ರಕ್ಷಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ವಕ್ಫ್ ಸುಧಾರಣಾ ಕಾಯ್ದೆಯ ಅನುಷ್ಠಾನದ ಬಗ್ಗೆ ನೀವು ಅಸಮಾಧಾನಗೊಂಡಿದ್ದೀರಿ ಎಂದು ನನಗೆ ತಿಳಿದಿದೆ. ನನ್ನನ್ನು ನಂಬಿ, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸುವ ಮೂಲಕ ಯಾರೂ ಆಳ್ವಿಕೆ ನಡೆಸಲು ಸಾಧ್ಯವಾಗುವಂತಹ ಯಾವುದೇ ಘಟನೆ ಬಂಗಾಳದಲ್ಲಿ ನಡೆಯುವುದಿಲ್ಲ. ಬಂಗಾಳದಲ್ಲಿ ವಾಸಿಸುವ ಜನರಿಗೆ ರಕ್ಷಣೆ ನೀಡುವುದು ನಮ್ಮ ಕೆಲಸ. ನಿಮಗೆ ಯಾರಾದರೂ ರಾಜಕೀಯವಾಗಿ ಒಗ್ಗೂಡಲು ಪ್ರಚೋದನೆ ನೀಡುತ್ತಿದ್ದರೆ, ದಯವಿಟ್ಟು ಹಾಗೆ ಮಾಡಬೇಡಿ ಎಂದು ನಾನು ನಿಮ್ಮೆಲ್ಲರಿಗೂ ಮನವಿ ಮಾಡುತ್ತೇನೆ. ದಯವಿಟ್ಟು ನೆನಪಿಡಿ, ನಾನು ನಿಮ್ಮ ಮತ್ತು ನಿಮ್ಮ ಆಸ್ತಿಯನ್ನು ರಕ್ಷಿಸುತ್ತೇನೆ. ನಾವು ಒಗ್ಗಟ್ಟಿನಿಂದ ಇದ್ದರೆ, ಜಗತ್ತನ್ನು ಗೆಲ್ಲಬಹುದು, ಎಂದು ಹೇಳಿದರು.

ಸಂಪಾದಕೀಯ ನಿಲುವು

ಭಾರತೀಯ ಸಂವಿಧಾನದ ರಕ್ಷಕರು ಎಂದು ಹೇಳಿಕೊಳ್ಳುವವರೇ ಸಂವಿಧಾನವನ್ನು ಗಾಳಿಗೆ ತೂರುತ್ತಿದ್ದಾರೆ, ಎಂಬುದನ್ನು ಗಮನಿಸಬೇಕಾಗಿದೆ! ಸಂಸತ್ತಿನಿಂದ ಅಂಗೀಕರಿಸಲ್ಪಟ್ಟ ಕಾನೂನಿಗೆ ಸರ್ವಾಧಿಕಾರಿ ಧೋರಣೆಯಿಂದ ವಿರೋಧಿಸುವ ಇಂತಹ ಪ್ರತ್ಯೇಕತಾವಾದಿ ಮನೋಭಾವವನ್ನು ಹತ್ತಿಕ್ಕಲು ಕೇಂದ್ರ ಸರಕಾರವು ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸುವುದು ಅವಶ್ಯಕವಾಗಿದೆ!