ಆಮದು ಸುಂಕದ ವಿಷಯದ ಬಗ್ಗೆ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಇವರಿಂದ ಮಾಹಿತಿ

ನವದೆಹಲಿ – ಅಮೆರಿಕದ ಆಮದು ಸುಂಕದ ಹೆಚ್ಚಳದ ಪರಿಣಾಮಗಳನ್ನು ಮೌಲ್ಯಮಾಪನ ಮಾಡುವುದು ತುಂಬಾ ಅವಸರದ ಸಂಗತಿಯಾಗಿದೆ. ಆದರೆ, ಭಾರತವು ವರ್ಷದ ಅಂತ್ಯದ ವೇಳೆಗೆ ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮಾಡುವ ಕಾರ್ಯತಂತ್ರದ ಯೋಜನೆಯನ್ನು ರೂಪಿಸಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಅವರು ವಾರ್ತಾವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮಾಹಿತಿ ನೀಡಿದ್ದಾರೆ.
ಡಾ. ಜೈಶಂಕರ್ ಅವರು ಮಾತು ಮುಂದುವರೆಸಿ,
1. ಭಾರತವು ಈ ವಿಷಯಕ್ಕೆ ತುಂಬಾ ಸಮತೋಲಿತ ಮತ್ತು ಚಿಂತನಶೀಲ ಪ್ರತಿಕ್ರಿಯೆಯನ್ನು ನೀಡಿದೆ. ಇದರ ನೇರ ಪರಿಣಾಮ ಏನಾಗುತ್ತದೆ? ಎಂದು ನಮಗೂ ಇನ್ನೂ ತಿಳಿದಿಲ್ಲ. ಆದ್ದರಿಂದ, ನಾವು ಆತುರದಿಂದ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಒಪ್ಪಂದವನ್ನು ಮಾಡುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ.
2. ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾದ ನಂತರ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ತಾತ್ವಿಕವಾಗಿ ಒಪ್ಪಂದ ಮಾಡಿಕೊಳ್ಳುವ ಭಾರತವು ಬಹುಶಃ ಏಕೈಕ ದೇಶವಾಗಿದೆ. ಈ ವಿಷಯದ ಬಗ್ಗೆ ಟ್ರಂಪ್ ಆಡಳಿತದೊಂದಿಗೆ ಶೀಘ್ರದಲ್ಲೇ ಚರ್ಚಿಸಲಾಗುವುದು ಮತ್ತು ಈ ವರ್ಷದ ಅಂತ್ಯದ ವೇಳೆಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು.
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !
ರಷ್ಯಾ: ಕಳೆದ ೬ ತಿಂಗಳುಗಳಲ್ಲಿ ೪೪ ಟನ್ ಚಿನ್ನ ಮಾರಾಟ!
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!