ನವದೆಹಲಿ – ನವೆಂಬರ್ 26, 2008 ರಂದು ಮುಂಬಯಿ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸೂತ್ರಧಾರ ತಹವ್ವೂರ್ ರಾಣಾನನ್ನು ಅಮೇರಿಕಾ ಭಾರತಕ್ಕೆ ಹಸ್ತಾಂತರಿಸಿದ ನಂತರ, ಅವನನ್ನು ಏಪ್ರಿಲ್ 10 ರಂದು ದೆಹಲಿಗೆ ಕರೆತರಲಾಯಿತು. ತಹವ್ವೂರನನ್ನು ರಾಷ್ಟ್ರೀಯ ತನಿಖಾ ದಳವು (ಎನ್ಐಎ) ವಶಕ್ಕೆ ತೆಗೆದುಕೊಂಡು ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು. ಅಲ್ಲಿ ಅವನ ವೈದ್ಯಕೀಯ ತಪಾಸಣೆ ಮಾಡಲಾಯಿತು. ಇದರ ನಂತರ ತಹವ್ವೂರನನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ಸಮಯದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು.