ಸನಾತನ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಅವರ ಭೇಟಿ !

ಗೋವಾದಲ್ಲಿ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಆಯೋಜನೆ !

ಪಣಜಿ – ಸನಾತನ ಸಂಸ್ಥೆಯ ರಜತ ಮಹೋತ್ಸವ ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ೮೩ನೇ ಜನ್ಮೋತ್ಸವದಿನದ ನಿಮಿತ್ತ ಮೇ ೧೭ ರಿಂದ ೧೯ ರವರೆಗೆ ಗೋವಾದ ಫೊಂಡಾದಲ್ಲಿ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ವನ್ನು ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಮಹೋತ್ಸವದ ಸ್ವಾಗತ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಅವರನ್ನು ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ್, ಹಾಗೆಯೇ ಸನಾತನದ ಸಂತ ಪೂ. (ಸೌ.) ಜ್ಯೋತಿ ಢವಳೀಕರ, ಪೂ. ಪೃಥ್ವಿರಾಜ ಹಜಾರೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಹಾಗೂ ಸರ್ವಶ್ರೀ. ನಾರಾಯಣ ನಾಡಕರ್ಣಿ, ಧನಂಜಯ ಹರ್ಷೆ ಮತ್ತು ನ್ಯಾಯವಾದಿ ರಾಜೇಶ್ ಗಾವಕರ್ ಅವರು ಗೌರವಾನ್ವಿತ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಅವರನ್ನು ಭೇಟಿ ಮಾಡಿ ಅವರಿಗೆ ಮಹೋತ್ಸವದ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು, ಹಾಗೆಯೇ ಅವರಿಗೆ ಮಹೋತ್ಸವಕ್ಕೆ ಆಹ್ವಾನ ನೀಡಿದರು.

ಫರ್ಮಾಗುಡಿ, ಫೊಂಡಾದ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಈ ಮಹೋತ್ಸವ ನಡೆಯಲಿದೆ. ಗೋವಾ ಸರಕಾರದ ವತಿಯಿಂದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಅವರು ಈ ಉಪಕ್ರಮಕ್ಕೆ ಬೆಂಬಲ ನೀಡಿದ್ದಾರೆ.