National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿಯಿಂದ ಬರೋಬ್ಬರಿ ೬೬೧ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು!

ನವದೆಹಲಿ: ಕಾಂಗ್ರೆಸ್‌ನ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆ ಮತ್ತು ‘ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್’ ಗೆ ಸಂಬಂಧಿಸಿದ ಹಣಕಾಸಿನ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಯನ್ನು ಜಪ್ತಿ ಮಾಡಲು ನೋಟಿಸ್ ಜಾರಿ ಮಾಡಿದೆ.

ನವೆಂಬರ್ 2023 ರಲ್ಲಿ, ಇಡಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ 90 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ ಷೇರುಗಳನ್ನು ಜಪ್ತಿ ಮಾಡಿತ್ತು. ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರನ್ನು ಈ ಹಿಂದೆ ವಿಚಾರಣೆ ಮಾಡಲಾಗಿತ್ತು.