Protest Against Israel In Bangladesh : ಬಾಂಗ್ಲಾದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಂದ ಇಸ್ರೇಲ್ ವಿರುದ್ಧ ಪ್ರತಿಭಟನೆ

  • ಟ್ರಂಪ್ ಮತ್ತು ನೆತನ್ಯಾಹು ಅವರ ಪ್ರತಿಕೃತಿಗಳ ದಹನ

  • ಪ್ರಧಾನಿ ಮೋದಿ ಅವರ ಪ್ರತಿಕೃತಿಯನ್ನೂ ದಹಿಸಿರುವ ದಾವೆ

ಢಾಕಾ (ಬಾಂಗ್ಲಾದೇಶ) – ನಗರದ ಢಾಕಾ ವಿಶ್ವವಿದ್ಯಾಲಯದ ಆವರಣದ ಸೊಹ್ರಾವರ್ದಿ ಉದ್ಯಾನದಲ್ಲಿ ಒಂದು ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಿದರು ಮತ್ತು ಪ್ಯಾಲೆಸ್ತೀನ್ ಗೆ ಬೆಂಬಲ ಸೂಚಿಸಿದರು. ಈ ಮೆರವಣಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು, ಎಂದು ಹೇಳಲಾಗಿದೆ. ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ‘ಪ್ಯಾಲೆಸ್ತೀನ್ ಮುಕ್ತಗೊಳಿಸಿ’ ಮತ್ತು ‘ಇಸ್ರೇಲ್ ಮುರ್ದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಅಮೇರಿಕದ ಅಧ್ಯಕ್ಷ ಡೊನಾಲ್ಡ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಪ್ರತಿಕೃತಿಗಳನ್ನು ದಹಿಸಿದರು. ಕೆಲವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನೂ ದಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

1. ಈ ಪ್ರತಿಭಟನೆಗೆ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಮತ್ತು ಇಸ್ಲಾಮಿ ಸಂಘಟನೆಗಳು ಬೆಂಬಲ ನೀಡಿದ್ದವು.

2. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಇಸ್ರೇಲ್ ವಿರುದ್ಧ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ ವಾರವೂ ಬಾಂಗ್ಲಾದೇಶದಲ್ಲಿ ಸಾವಿರಾರು ಜನರು ಬೀದಿಗಿಳಿದು ಗಾಜಾದಲ್ಲಿನ ಇಸ್ರೇಲಿ ದಾಳಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ್ದರು.

3. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಇಸ್ರೇಲ್, ಅಮೇರಿಕ ಮತ್ತು ಅವರ ಮಿತ್ರ ರಾಷ್ಟ್ರಗಳಿಗೆ ಸಂಬಂಧಿಸಿದ ಸಂಸ್ಥೆಗಳ ಕಟ್ಟಡಗಳನ್ನು ಗುರಿಯಾಗಿಸಿ ಧ್ವಂಸಗೊಳಿಸಿದರು.

4. ಬೊಗರಾ, ಸಿಲ್ಹೆಟ್ ಮತ್ತು ಕಾಕ್ಸ್ ಬಜಾರ್ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬಾಟಾ, ಕೆ.ಎಫ್.ಸಿ. ಮತ್ತು ಪಿಜ್ಜಾ ಹಟ್‌ನಂತಹ ಸಂಸ್ಥೆಗಳ ಮೇಲೆ ದಾಳಿ ಮಾಡಲಾಯಿತು.

5. ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿರುವ ಬಾಂಗ್ಲಾದೇಶಕ್ಕೆ ಇಸ್ರೇಲ್ ನೊಂದಿಗೆ ರಾಜತಾಂತ್ರಿಕ ಸಂಬಂಧಗಳಿಲ್ಲ. ಬಾಂಗ್ಲಾದೇಶವು ಅಧಿಕೃತವಾಗಿ ಸ್ವತಂತ್ರ ಪ್ಯಾಲೆಸ್ತೀನ್ ಗೆ ಬೆಂಬಲ ನೀಡುತ್ತದೆ.

ಸಂಪಾದಕೀಯ ನಿಲುವು

ಬಾಂಗ್ಲಾದೇಶದಲ್ಲಿ ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆದರೆ, ಪ್ರತಿಭಟನಾಕಾರರು ತಮ್ಮ ಕೋಪವನ್ನು ಅಲ್ಲಿನ ಹಿಂದೂಗಳ ಮೇಲೆ ತೋರಿಸಿ ಅವರ ನರಮೇಧ ಮಾಡುತ್ತಾರೆ, ಇದು ಇಲ್ಲಿಯವರೆಗೆ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಂದ ತಿಳಿದುಬಂದಿದೆ. ಈಗಲೂ ಹಾಗೆಯೇ ನಡೆದರೆ ಆಶ್ಚರ್ಯವೇನಿಲ್ಲ!