ಪಹಲ್ಗಾಮ್ ದಾಳಿಯ ಸೂತ್ರಧಾರ ಭಯೋತ್ಪಾದಕ ಸೈಫುಲ್ಲಾ ಕಸೂರಿಯ ಹೇಳಿಕೆ !

ಇಸ್ಲಾಮಾಬಾದ್ (ಪಾಕಿಸ್ತಾನ) – ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ದಾಳಿಯ ನೆಪದಲ್ಲಿ ಭಾರತೀಯ ಮಾಧ್ಯಮಗಳು ನನ್ನನ್ನು ಹೊಣೆಗಾರನನ್ನಾಗಿ ಮಾಡಿವೆ. ಪಾಕಿಸ್ತಾನದ ಮೇಲೂ ಆರೋಪ ಹೊರಿಸಲಾಗಿದೆ. ಇದು ದುಃಖದ ಸಂಗತಿ. ಭಾರತವು ಪಾಕಿಸ್ತಾನವನ್ನು ನಾಶಮಾಡಲು ಬಯಸುತ್ತದೆ. ಅದು ಒಂದು ಕ್ರೂರ ಶತ್ರು. ಕಾಶ್ಮೀರದಲ್ಲಿ 10 ಲಕ್ಷ ಸೈನಿಕರನ್ನು ಕಳುಹಿಸಿ ಯುದ್ಧದ ವಾತಾವರಣವನ್ನು ಸೃಷ್ಟಿಸಿದೆ.

ಪಹಲ್ಗಾಮ್‌ನಲ್ಲಿ ಭಾರತವೇ ದಾಳಿ ಮಾಡಿದೆ ಮತ್ತು ಅದಕ್ಕಾಗಿ ಅದೇ ಹೊಣೆಗಾರ. ಇದು ಅದರ ಷಡ್ಯಂತ್ರ. ಇದಕ್ಕೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಈ ದಾಳಿಯ ಸೂತ್ರಧಾರನಾಗಿರುವ ಲಷ್ಕರ್-ಎ-ತೊಯ್ಬಾದ ಉಪ ಕಮಾಂಡರ್ ಸೈಫುಲ್ಲಾ ಕಸೂರಿ ಒಂದು ವೀಡಿಯೊವನ್ನು ಬಿಡುಗಡೆ ಮಾಡಿ ಹೇಳಿದ್ದಾನೆ.
ಸಂಪಾದಕೀಯ ನಿಲುವುಪಾಕಿಸ್ತಾನವು ಕಳೆದ 35 ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿದೆ; ಆದರೆ ಒಂದೇ ಒಂದು ದಾಳಿಯ ಜವಾಬ್ದಾರಿಯನ್ನು ಅದು ಎಂದಿಗೂ ಒಪ್ಪಿಕೊಂಡಿಲ್ಲ. ಆದ್ದರಿಂದ ಈಗಲೂ ಅದೇ ಹೇಳುತ್ತಿರುವುದರಲ್ಲಿ ಆಶ್ಚರ್ಯವೇನೂ ಇಲ್ಲ! |
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !
ರಷ್ಯಾ: ಕಳೆದ ೬ ತಿಂಗಳುಗಳಲ್ಲಿ ೪೪ ಟನ್ ಚಿನ್ನ ಮಾರಾಟ!
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin