ಸ್ವಾತಂತ್ರ್ಯವೀರ ಸಾವರ್ಕರ್ ಕುರಿತು ಆಕ್ಷೇಪಾರ್ಹ ಟೀಕೆ; ಸುಪ್ರಿಂ ಕೋರ್ಟ್ ನಿಂದ ರಾಹುಲ ಗಾಂಧಿಗೆ ಛೀಮಾರಿ !

ನವದೆಹಲಿ – ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಆಧಾರರಹಿತವಾಗಿ ಮಾತನಾಡುವುದಕ್ಕೆ ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ಅವರು ನಮಗೆ ಸ್ವಾತಂತ್ರ್ಯ ತಂದುಕೊಟ್ಟರು ಮತ್ತು ನಾವು ಅವರನ್ನು ಹೇಗೆ ನಡೆಸಿಕೊಳ್ಳುತ್ತಿದ್ದೇವೆ? ಭವಿಷ್ಯದಲ್ಲಿ ನೀವು ಇಂತಹ ಯಾವುದೇ ಹೇಳಿಕೆ ನೀಡಿದರೆ, ನಾವೇ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬೇಜವಾಬ್ದಾರಿತನದ ಹೇಳಿಕೆಗಳನ್ನು ನೀಡಬೇಡಿ ಎಂದು ಸುಪ್ರೀಂ ಕೋರ್ಟ್ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ ಗಾಂಧಿಯವರನ್ನು ಸ್ವಾತಂತ್ರ್ಯವೀರ ಸಾವರ್ಕರ್ ಕುರಿತು ಆಕ್ಷೇಪಾರ್ಹ ಟೀಕೆ ಮಾಡಿದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ಈ ಸಂದರ್ಭದಲ್ಲಿ, ರಾಹುಲ ಗಾಂಧಿಯವರ ವಿರುದ್ಧದ ಕೆಳ ನ್ಯಾಯಾಲಯದ ಸಮನ್ಸ್‌ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿತು. ರಾಹುಲ್ ಗಾಂಧಿಯವರಿಗೆ ನೀಡಲಾದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೂ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ನವೆಂಬರ್ 17, 2022 ರಂದು, ರಾಹುಲ್ ಗಾಂಧಿಯವರು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಭಾರತ ಜೋಡೋ ಯಾತ್ರೆಯ ಸಭೆಯಲ್ಲಿ ಸಾವರ್ಕರ್ ಬಗ್ಗೆ ವಿವಾದಾತ್ಮಕ ಟೀಕೆ ಮಾಡಿದ್ದರು. ಇದರ ನಂತರ, 2023 ರಲ್ಲಿ ವಕೀಲ ನೃಪೇಂದ್ರ ಪಾಂಡೆ ಅವರು ರಾಹುಲ್ ಗಾಂಧಿಯವರ ವಿರುದ್ಧ ದೂರು ದಾಖಲಿಸಿದ್ದರು.
ಸಂಪಾದಕೀಯ ನಿಲುವುಈ ಪ್ರಕರಣದಲ್ಲಿ ರಾಹುಲ್ ಗಾಂಧಿಯವರ ಕೈಕಾಲುಗಳಿಗೆ ಬೇಡಿ ಹಾಕಿ, ಕಾಲಾ ಪಾನಿ ಶಿಕ್ಷೆ ವಿಧಿಸಿ ಎಣ್ಣೆ ಗಾಣವನ್ನು ತಿರುಗಿಸುವ ಶಿಕ್ಷೆ ವಿಧಿಸಬೇಕು. ಆಗ ಮಾತ್ರ ಅವರು ಸರಿಹಾದಿಗೆ ಬರುತ್ತಾರೆ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !