ದೇಶದಲ್ಲಿ ದುಃಖದ ಅಲೆ ಇರುವಾಗ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಉಚಿತ ಸೀರೆ ವಿತರಣೆಯಲ್ಲಿ ಮಗ್ನ !

ರಾಮನಗರ – ಕಾಶ್ಮೀರದ ಪಹಲ್ಗಾಮ್‌ನಲ್ಲಿ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ೨೬ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ. ಇಡೀ ದೇಶ ಈ ನರಮೇಧದಿಂದ ದುಃಖಿತವಾಗಿದೆ. ಈ ದಾಳಿಯಲ್ಲಿ ಹತ್ಯೆಯಾದ ಇಬ್ಬರು ಕನ್ನಡಿಗರ ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ನೆರವೇರಿತು. ಇಂತಹ ಪರಿಸ್ಥಿತಿಯಲ್ಲಿ ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಅವರು ಮಾರ್ಚ್ ತಿಂಗಳಲ್ಲಿ ನಡೆದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾವಿರಾರು ಮಹಿಳೆಯರಿಗೆ ಈಗ ಸೀರೆಗಳನ್ನು ವಿತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. (ಇಂತಹವರನ್ನು ಜನಪ್ರತಿನಿಧಿಗಳೆಂದು ಹೇಗೆ ಕರೆಯುವುದು? – ಸಂಪಾದಕರು)
ಪ್ರವಾಸಕ್ಕೆಂದು ಹೋದ ಮುಗ್ಧ ಹಿಂದೂ ಪ್ರವಾಸಿಗರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ ಶಿವಮೊಗ್ಗದ ಮಂಜುನಾಥ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಸೇರಿದ್ದಾರೆ. ಈ ಘಟನೆಯ ನಂತರ ರಾಜ್ಯ ಮತ್ತು ಇಡೀ ದೇಶ ಶೋಕ ವ್ಯಕ್ತಪಡಿಸುತ್ತಿರುವಾಗ, ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಮಾತ್ರ ಈ ಎಲ್ಲದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಸಂಭ್ರಮದಲ್ಲಿ ಮಗ್ನರಾಗಿದ್ದಾರೆ. ರಾಮನಗರದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಸೀರೆಗಳ ವ್ಯವಸ್ಥೆ ಮಾಡಲಾಗಿತ್ತು. (ಇದು ಒಂದು ರೀತಿಯ ಆಮಿಷವಲ್ಲವೇ? ಇದಕ್ಕಾಗಿ ಹಣ ಎಲ್ಲಿಂದ ಬಂತು?, ಇದು ಜನರ ಮುಂದೆ ಬರಬೇಕು! – ಸಂಪಾದಕರು)
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!