ಪಹಲ್ಗಾವ್ ಭಯೋತ್ಪಾದಕ ದಾಳಿಯ ಪ್ರಕರಣ
ವಾಷಿಂಗ್ಟನ್ – ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಪತ್ತೆಹಚ್ಚಲು ಅಮೆರಿಕ ಭಾರತಕ್ಕೆ ಸಹಾಯ ಮಾಡಲಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆಯ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಘೋಷಿಸಿದ್ದಾರೆ. ‘ಈ ಭಯಾನಕ ಜಿಹಾದಿ ಭಯೋತ್ಪಾದಕ ದಾಳಿಯ ನಂತರ ನಾವು ಭಾರತದೊಂದಿಗೆ ಇದ್ದೇವೆ’ ಎಂದು ಅವರು ಹೇಳಿದ್ದಾರೆ.
ಪಹಲ್ಗಾಮ್ನಲ್ಲಿ ಜಿಹಾದಿ ಭಯೋತ್ಪಾದಕರು ೨೬ ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡಿದ್ದರು. ‘ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾವು ನಮ್ಮ ಪ್ರಾಮಾಣಿಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ನಾವು ನಿಮ್ಮೊಂದಿಗಿದ್ದೇವೆ ಮತ್ತು ಈ ಭಯಾನಕ ದಾಳಿಗೆ ಕಾರಣರಾದವರನ್ನು ಶಿಕ್ಷಿಸಲು ನಾವು ನಿಮಗೆ ಬೆಂಬಲ ನೀಡುತ್ತೇವೆ’ ಎಂದು ತುಳಸಿ ಗಬ್ಬಾರ್ಡ್ ತಮ್ಮ ‘ಎಕ್ಸ್’ನಲ್ಲಿ ಪ್ರಸಾರ ಮಾಡಿದ ‘ಪೋಸ್ಟ್’ನಲ್ಲಿ ಹೇಳಿದ್ದಾರೆ.