
ನವದೆಹಲಿ – ಭಾರತೀಯ ನೌಕಾಪಡೆಯು ಅರಬ್ಬೀ ಸಮುದ್ರದಲ್ಲಿ ಯುದ್ಧನೌಕೆಗಳಿಂದ ಅನೇಕ ಕ್ಷಿಪಣಿಗಳ ಯಶಸ್ವಿ ಪರೀಕ್ಷೆಯನ್ನು ನಡೆಸಿತು. ನಾವು ಹಗಲು ರಾತ್ರಿ ದೇಶವನ್ನು ರಕ್ಷಿಸಲು ಸಿದ್ಧರಿದ್ದೇವೆ ಎಂದು ನೌಕಾಪಡೆ ತಿಳಿಸಿದೆ. ಸಮುದ್ರದಲ್ಲಿ ಎಲ್ಲಿಯೇ ಅಪಾಯವಿದ್ದರೂ, ನಾವು ಅದನ್ನು ಸುಲಭವಾಗಿ ಎದುರಿಸಬಹುದು, ಎಂದು ಹೇಳಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಸತತ ಮೂರನೇ ದಿನ ಗುಂಡಿನ ದಾಳಿ

ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯಲ್ಲಿ ಸತತ ಮೂರನೇ ದಿನ ಗುಂಡಿನ ದಾಳಿ ನಡೆಸಿದೆ. ತೂತಮಾರಿ ಗಲಿ ಮತ್ತು ರಾಮ್‌ಪುರ ವಲಯದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿದೆ. ಇದರಲ್ಲಿ ಯಾವುದೇ ಜೀವ ಅಥವಾ ಆಸ್ತಿ ಹಾನಿ ಸಂಭವಿಸಿದ ವರದಿಯಾಗಿಲ್ಲ. ಮತ್ತೊಂದೆಡೆ, ಭಾರತ ಸರಕಾರವು ಪಾಕಿಸ್ತಾನಿ ಸುದ್ದಿ ವಾಹಿನಿಗಳ ಸಾಮಾಜಿಕ ಮಾಧ್ಯಮ ಪುಟಗಳನ್ನು ನಿಷೇಧಿಸಿದೆ.
ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

ಕಾಶ್ಮೀರದ ಬಡ್ಗಾಮ್‌ನಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ತಾಹೀರ್ ಅಹ್ಮದ್ ಕುಮಾರ್ ಮತ್ತು ಶಬೀರ್ ಅಹ್ಮದ್ ಗನೈ ಅವರ ಹೆಸರುಗಳು. ಇಬ್ಬರೂ ಭಯೋತ್ಪಾದಕರಿಗೆ ಸಹಾಯ ಮಾಡಿದ್ದರು ಮತ್ತು ಸ್ಥಳೀಯ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಪ್ರೇರೇಪಿಸುತ್ತಿರುವುದು ತಿಳಿದುಬಂದಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ