ಮಂಗಳುರು – ಮಂಗಳೂರಿನ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ‘ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾಳೆ. ಈ ಪೋಸ್ಟ್ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಬಂದಿದ್ದು, ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆಯಾಗಿದ್ದ ಅಫೀಫಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಆಸ್ಪತ್ರೆಯು ಆಕೆಯನ್ನು ವಜಾ ಮಾಡಿದೆ. ಈ ಹಿಂದೆ ಪಹಲ್ಗಾಮ್ ದಾಳಿಯನ್ನು ಸಮರ್ಥಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧವೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
1. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಡಾಕ್ಟರ ಅಫೀಫಾ ಫಾತಿಮಾ ವಿರುದ್ಧ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2. ಡಾಕ್ಟರ್ ಅಫೀಫಾ ಫಾತಿಮಾ ಅವರ ಪೋಸ್ಟ್‌ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ, ಹೈಲ್ಯಾಂಡ್ ಆಸ್ಪತ್ರೆ ಆಡಳಿತ ಮಂಡಳಿಯು ಆಕೆಯನ್ನು ಕೆಲಸದಿಂದ ತೆಗೆದುಹಾಕಿದೆ. ನಂತರ ಆಸ್ಪತ್ರೆಯ ಅಧಿಕಾರಿಯೊಬ್ಬರು ಆಕೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
3. ಡಾಕ್ಟರ್ ಅಫೀಫಾ ಫಾತಿಮಾ ಅವರ ದೇಶದ್ರೋಹಿ ಮತ್ತು ಹಿಂದೂ ವಿರೋಧಿ ಬರಹವನ್ನು ಮಂಗಳೂರು ಪೊಲೀಸರು ಗಂಭೀರವಾಗಿ ಪರಿಗಣಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ ಕುಮಾರ್ ಪಂಪವೆಲ್ ಒತ್ತಾಯಿಸಿದ್ದಾರೆ.”
ಸಂಪಾದಕೀಯ ನಿಲುವು
|