ಭಾಜಪ ಪ್ರತಿಭಟನೆ ನಡೆಸಿದ್ದರಿಂದ ಈ ಕೃತ್ಯ

ಬೆಳಗಾವಿ – ಇಲ್ಲಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತಲು ಪ್ರಯತ್ನಿಸಿದರು. ಸಿದ್ದರಾಮಯ್ಯ ವೇದಿಕೆಯ ಮೇಲಿದ್ದಾಗ ಅಲ್ಲಿ ನೆರೆದಿದ್ದ ಜನರ ಮುಂದೆ ಈ ಘಟನೆ ನಡೆಯಿತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಸರಕಾರದ ಜನವಿರೋಧಿ ನೀತಿಗಳು ಮತ್ತು ದೇಶವಿರೋಧಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಆಯೋಜಿಸಿತ್ತು. ಆ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಭಾಜಪವು ಮುಖ್ಯಮಂತ್ರಿಗಳ ವಿರುದ್ಧ ಟೀಕೆ ಮಾಡಿದೆ.
ಏನು ಈ ಪ್ರಕರಣ ?
ಈ ಕಾರ್ಯಕ್ರಮದ ಸಮಯದಲ್ಲಿ, ಭಾಜಪ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸಿದರು ಇದರಿಂದ ಕೋಪಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೊಲೀಸ್ ಅಧಿಕಾರಿಯನ್ನು ವೇದಿಕೆಗೆ ಕರೆಸಿ “ನೀನು ಏನು ಮಾಡುತ್ತಿದ್ದೀಯಾ?” ಎಂದು ಕೇಳಿಅವರ ಮೇಲೆ ಕೈ ಎತ್ತಲು ಪ್ರಯತ್ನಿಸಿದರು, ಆದರೆ ಹಲ್ಲೆ ಮಾಡಲಿಲ್ಲ. ಈ ಸಮಯದಲ್ಲಿ ಅಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸಿದ್ದರಾಮಯ್ಯನವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು.
ಸಂಪಾದಕೀಯ ನಿಲುವುಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸುವವರು ಜನರೊಂದಿಗೆ ಹೇಗೆ ವರ್ತಿಸುತ್ತಾರೆ? ಇದು ಗಮನಕ್ಕೆ ಬರುತ್ತದೆ! ಭಾಜಪ ನಡೆಸಿದ ಪ್ರತಿಭಟನೆಯನ್ನು ಸಹಿಸಿಕೊಳ್ಳಲಾಗದ ಸಿದ್ದರಾಮಯ್ಯನವರು ಪಹಲ್ಗಾಮ್‌ನಲ್ಲಿನ ಹಿಂದೂಗಳ ಸಾವಿನ ಬಗ್ಗೆ ಮಾತ್ರ ಅಸಂವೇದನಶೀಲತೆಯನ್ನು ತೋರಿಸುತ್ತಾರೆ, ಎಂಬುದನ್ನು ಗಮನಿಸಿ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ