
ಬೆಂಗಳೂರು – ಭಾರತ-ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದಕ ದಾಳಿಗಳು ಮತ್ತು ಕದನ ವಿರಾಮ ಉಲ್ಲಂಘನೆಯಿಂದ ಉದ್ವಿಗ್ನ ವಾತಾವರಣವಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರಿಗೆ ಶೌರ್ಯ ಮತ್ತು ಶಕ್ತಿ ಲಭಿಸಿ ಯಶಸ್ಸು ಸಿಗಲಿ ಎಂದು ಬೆಂಗಳೂರಿನ ರಾಜಾಜಿನಗರದ ಶ್ರೀರಾಮ ಮಂದಿರದ ಮೈದಾನದಲ್ಲಿ ಶ್ರೀರಾಮ ಸೇನೆ ಮತ್ತು ಬಜರಂಗದಳದ ನೇತೃತ್ವದಲ್ಲಿ ವಿಶೇಷ ಮಹಾಯಾಗ ಮತ್ತು ಶೋಭಾಯಾತ್ರೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಮತ್ತು ಸಾವಿರಾರು ಹಿಂದುತ್ವನಿಷ್ಠ ಕಾರ್ಯಕರ್ತರು ಭಾಗವಹಿಸಿದ್ದರು.
ರಾಮ ಭದ್ರಕಯಾಗ, ಸಂಕಲ್ಪಯಾಗ ಮತ್ತು ಪರಶುರಾಮರ ಪರಶುವಿನ ವಿಶೇಷ ಪೂಜೆ!
ಯುದ್ಧದ ಪರಿಸ್ಥಿತಿಯಲ್ಲಿ ಭಾರತೀಯ ಸೈನಿಕರಿಗೆ ಧೈರ್ಯ ಮತ್ತು ಶಕ್ತಿ ಸಿಗಲಿ ಎಂದು ಹಿಂದೂ ಸಂಘಟನೆಗಳು ರಾಮ ಭದ್ರಕಯಾಗ, ಸಂಕಲ್ಪಯಾಗ ಮತ್ತು ಭಗವಾನ ಪರಶುರಾಮರ ಪರಶುವಿನ ವಿಶೇಷ ಪೂಜೆಯನ್ನು ಆಯೋಜಿಸಿದ್ದವು. ಈ ಯಾಗದಲ್ಲಿ ಸೈನಿಕರ ಕಲ್ಯಾಣಕ್ಕಾಗಿ ವಿಶೇಷ ಹೋಮ ಮತ್ತು ಮಂತ್ರೋಚ್ಛಾರಣೆ ಮಾಡಲಾಯಿತು.
ಯಜ್ಞದ ಮೂಲಕ ಸೈನಿಕರಿಗೆ ಆಧ್ಯಾತ್ಮಿಕ ಶಕ್ತಿ ಪ್ರದಾನ! – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ರಾಮಮಂದಿರದ ಬಳಿಯ ಮೈದಾನದಲ್ಲಿ ಧಾರ್ಮಿಕ ಸಭೆಯನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ‘‘ನಮ್ಮ ಸೈನಿಕರು ದೇಶದ ಗೌರವ ಮತ್ತು ಸುರಕ್ಷತೆಗಾಗಿ ಹೋರಾಡುತ್ತಿದ್ದಾರೆ. ಈ ಯಜ್ಞ ಮತ್ತು ಪೂಜೆಗಳ ಮೂಲಕ ನಾವು ಅವರಿಗೆ ಆಧ್ಯಾತ್ಮಿಕ ಶಕ್ತಿಯನ್ನು ನೀಡುತ್ತಿದ್ದೇವೆ.’’ ಎಂದರು.
ಒಗ್ಗಟ್ಟಿನಿಂದ ಸೈನಿಕರನ್ನು ಬೆಂಬಲಿಸೋಣ! – ಪ್ರಮೋದ ಮುತಾಲಿಕ್
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಈ ಸಂದರ್ಭದಲ್ಲಿ ಮಾತನಾಡಿ, ಪಾಕಿಸ್ತಾನದ ಭಯೋತ್ಪಾದಕ ದಾಳಿಗಳಿಗೆ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಸೈನಿಕರನ್ನು ಬೆಂಬಲಿಸೋಣ ಎಂದು ಕರೆ ನೀಡಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !